ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ದೇಶವ್ಯಾಪಿ ಬೃಹತ್‌ ಹೋರಾಟ : ಶಾಂತ 

Ravi Talawar
ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ದೇಶವ್ಯಾಪಿ ಬೃಹತ್‌ ಹೋರಾಟ : ಶಾಂತ 
WhatsApp Group Join Now
Telegram Group Join Now
ಬಳ್ಳಾರಿ ಮೇ 22 : ದೇಶದ ಅಸಂಘಟಿತ ಕಾರ್ಮಿಕರು ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿ ಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ) ದ ಕರ್ನಾಟಕ ರಾಜ್ಯ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಮುಷ್ಕರದಲ್ಲಿ ಭಾಗವಹಿಸುತ್ತದೆ ಎಂದು ಶಾಂತ ತಿಳಿಸಿದರು.
 ಅವರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವಧನ ಪ್ರೋತ್ಸಾಹಧನಗಳನ್ನು ಹೆಚ್ಚಿಸಬೇಕು. ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.10,000/- ಪಾವತಿಯಾಗುವಂತೆ ಶೀಘ್ರವಾಗಿ ಆದೇಶ ಮಾಡಬೇಕುಹಾಗೂ ಈ ಕೆಳಗಿನ   ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಬೇಕೆಂದರು.
ಹಕ್ಕೊತ್ತಾಯಗಳು:ರಾಜ್ಯದಲ್ಲಿ ಕಳೆದ ಜನವರಿ ಅನಿರ್ದಿಷ್ಟ ಆಶಾ ಹೋರಾಟದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಮಾಸಿಕರೂ.10000 ನೀಡುವ ಆದೇಶವಾಗಬೇಕು. ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು,  ಕೇಂದ್ರದಲ್ಲಿ ಇತ್ತೀಚಿನ ಪಾರ್ಲಿಮೆಂಟ್ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮಂತ್ರಿಗಳು ಆಶಾ ಕಾರ್ಯಕರ್ತೆಯರಿಗೆಹೇಳಿದ ಪ್ರೋತ್ಸಾಹಧನ ಹೆಚ್ಚಳ ಕೂಡಲೇ ಮಾಡಬೇಕು,  ಆಶಾ, ಆಂಗನವಾಡಿ, ಬಿಸಿಯೂಟ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ರೂ. 36,000 ನಿಗದಿ ಮಾಡಬೇಕು ಎಂಬ ಬೇಡಿಕೆಯು ಸೇರಿದಂತೆ ಕೆಲಸದ ಅವಧಿಯನ್ನು ಪ್ರಸ್ತುತದಲ್ಲಿರುವ ದಿನಕ್ಕೆ 8 ಗಂಟೆ ಮತ್ತು ವಾರಕ್ಕೆ 48 ಗಂಟೆ ಮಿತಿಯನ್ನು ಖಾತ್ರಿಗೊಳಿಸಿ. ಮಹಿಳೆಯರಿಗೆ ರಾತ್ರಿಪಾಳಿ ಅವಕಾಶ ನೀಡುವ ಆದೇಶವನ್ನು ಪಡೆಯಿರಿ, ಕಾರ್ಮಿಕ ವಿರೋಧಿ ಬಂಡವಾಳಶಾಹಿಪರ ನಾಲ್ಕು ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಿ,  ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಖಾತ್ರಿಪಡಿಸಿ, ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಲು ಒತ್ತಾಯಿಸಿದರು.
 ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಗೌರವ ಅಧ್ಯಕ್ಷರು  ಎ. ಶಾಂತ ಜಿಲ್ಲಾಧ್ಯಕ್ಷರು ಗೀತಾ, ರೇಷ್ಮಾ ನಗರಧ್ಯಕ್ಷರು, ಉಮಾದೇವಿ, ಭಾಗ್ಯಮ್ಮ, ಶಶಿಕಲಾ, ಶಾಂತಕುಮಾರಿ,
WhatsApp Group Join Now
Telegram Group Join Now
Share This Article