ಬಜೆಟ್ ನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಮನವಿ

Sandeep Malannavar
ಬಜೆಟ್ ನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಮನವಿ
WhatsApp Group Join Now
Telegram Group Join Now
ಬಳ್ಳಾರಿ.ಫೆ.12 – ಮಂಡಿಸಲಿರುವ 2026-2027ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಯ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ, ಹಣ ದುರ್ಬಳಕೆ ತಡೆಯಲು SCSP/TSP ಕಾಯ್ದೆ ಸೆಕ್ಷನ್ 7 (ಸಿ) ರದ್ದುಪಡಿಸುವಂತೆ ಹಾಗೂ ನ್ಯಾಯ ಸಮ್ಮತವಾದ  ಬೇಡಿಕೆಗಳಿಗೆ ಸೂಕ್ತ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ( ಪ್ರೊಫೆಸರ್ ಬಿ ಕೃಷ್ಣಪ್ಪ ಬಣ) ಜಿಲ್ಲಾ ಸಮಿತಿ ಮನವಿ ಮಾಡಿದೆ.
ಹಕ್ಕೊತ್ತಾಯಗಳು:-
. 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಬೇಕು, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು SCSP/TSP ಕಾಯ್ದೆ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ ಸೆಕ್ಷನ್ 7 (ಸಿ) ರದ್ದುಪಡಿಸಿ ಆದೇಶ ಹೊರಡಿಸಬೇಕು ಹಾಗೂ SCSP/TSPಯ ಅನುದಾನ ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ 25 ಸಾವಿರ ಕೋಟಿ ಹಣವನ್ನು ಹಿಂತಿರುಗಿಸಬೇಕು.
2 ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಖರೀದಿಸುವ ಜಮೀನು ದರ ಅವೈಜ್ಞಾನಿಕವಾಗಿದೆ. ಖಾಸಗಿ ಜಮೀನು ಬೆಲೆ ಅತೀ ಹೆಚ್ಚಳವಾಗಿದ್ದು, ವಸತಿ ಇಲಾಖೆಯು ಹೊರಡಿಸಿರುವ ಆದೇಶ ಸಂಖ್ಯೆ: ವಇ 33 HAH2016 (ಭಾಗ -2) ದಿನಾಂಕ: 12.07.2016 ಅನ್ನು ಪುನಃ ಪರಿಷ್ಕರಿಸಿ ಪ್ರಸ್ತುತ ಭೂಮಿಯ ದರ ಹೆಚ್ಚಿಸಿ ಆದೇಶ ಹೊರಡಿಸಬೇಕು.
ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ ಪಡೆಯಲು ನಿವೇಶನ ಹೊಂದಿರಬೇಕು. ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು ರೂ.5 ಲಕ್ಷ ಆರ್ಥಿಕ ನೆರವು ನೀಡಬೇಕು ಹಾಗೂ ವಿವಿಧ ವಸತಿ ಯೋಜನೆಗಳಿಗೆ ನೀಡುವ ಮನೆಗಳ ನಿರ್ಮಾಣ ವೆಚ್ಚ ಕನಿಷ್ಟ ರೂ. 5 ಲಕ್ಷ ವರೆಗೆ ಹೆಚ್ಚಿಸಬೇಕು.
ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿರದಿದ್ದರೆ ಖಾಸಗಿ ಭೂಮಿ ಖರೀದಿಸಿ ನಿವೇಶನ ಹಂಚಿಕೆ ಮಾಡಬೇಕು.
. ಬಗರ್ ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಸಲ್ಲಿಸಿರುವ ನಮೂನೆ- 57ರ ಅರ್ಜಿಗಳನ್ನು ಸೂಕ್ತಡಿ ಕಾರಣವನ್ನು ನೀಡದೆ ಏಕಪಕ್ಷೀಯವಾಗಿ ತಿರಸ್ಕಾರ ಮಾಡುತ್ತಿರುವುದರಿಂದ ಬೇರೆ ಭೂಮಿ ಇಲ್ಲದೆ, ಇದೇ ಭೂಮಿಯಲ್ಲಿ ಸಾಗುವಳಿ ಮಾಡಿ ಉಪ ಜೀವನ ಸಾಗಿಸುತ್ತಿರುವ ಬಡವರನ್ನು ಭೂ ಹಕ್ಕಿನಿಂದ ಒಕ್ಕಲೆಬ್ಬಿಸದೆ, ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು. ಸೇರಿದಂತೆ ಪ್ರಮುಖ 17 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ
ಡಿಎಸ್ಎಸ್ ಜಿಲ್ಲಾ ಸಮಿತಿಯ ಜಿಲ್ಲಾ ಸಂಚಾಲಕರು ಜಿ ಗೋವರ್ಧನ, ಜಿಲ್ಲಾ ಸಂಘಟನಾ ಸಂಚಾಲಕರು ಏ.ಕೆ ನಾಗರಾಜ್. ಜಿಲ್ಲಾ ಸಂ ಸಂಚಾಲಕರು ಫೋಟೋ ರಾಜ್, ಜಿಲ್ಲಾ ಸಂ ಸಂಚಾಲಕರು ಡಿ. ಎ ನಾಗರಾಜ್, ಜಿಲ್ಲಾ ಸಂ ಸಂಚಾಲಕರು ಕೆ ಮುರಳಿ ಮೋಹನ್, ಬಳ್ಳಾರಿ ನಗರ ಸಂಚಾಲಕರು ಹೆಚ್. ಹೊನ್ನೇಶ್, ಡಿ ಎಸ್ ಎಸ್ ಮುಖಂಡರಾದ ಗುರುದೇವ, ಸೋಮಪ್ಪ ಕೊಳಗಲ್, ಗಾದಿಲಿಂಗಪ್ಪ,ದೇವಪುತ್ರ, ಪ್ರಹ್ಲಾದ್ ಮತ್ತಿತರರಿದ್ದರು
WhatsApp Group Join Now
Telegram Group Join Now
Share This Article