ಬೆಂಗಳೂರು, ಅಕ್ಟೋಬರ್ 28: ಕಲಬುರಗಿಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆರ್ಎಸ್ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಸಂಘರ್ಷ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ.


