ದೆಹಲಿ,17: ನನ್ನ ಜತೆ ನಡೆದಿದ್ದು ತುಂಬಾ ಕೆಟ್ಟ ಘಟನೆ ಎಂದು ಸಂಸದೆ ಸ್ವಾತಿ ಮಲಿವಾಲ್ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ತಮ್ಮ ಜತೆ ನಡೆದುಕೊಂಡಿರುವ ರೀತಿ ಬಗ್ಗೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ನಡೆದ ಘಟನೆಯ ಕುರಿತು ಪೊಲೀಸರಿಗೆ ಹೇಳಿಕೆ ನೀಡಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇದೆ. ಕಳೆದ ದಿನಗಳು ನನಗೆ ತುಂಬಾ ಕಷ್ಟಕರವಾಗಿತ್ತು. ಪ್ರಾರ್ಥಿಸಿದವರಿಗೆ ನಾನು ಧನ್ಯವಾದ ಹೇಳುತ್ತೇನೆ. ಚಾರಿತ್ರ್ಯವಧೆ ಮಾಡಲು ಯತ್ನಿಸಿದವರು ಬೇರೆ ಪಕ್ಷದವರ ಒತ್ತಾಯದ ಮೇರೆಗೆ ಮಾಡುತ್ತಿದ್ದಾರೆ, ಅವರಿಗೂ ದೇವರ ದಯೆ ಇರಲಿ ಎಂದು ಸ್ವಾತಿ ಟ್ವೀಟ್ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಪಿಸಿಆರ್ಗೆ ಕರೆ ಮಾಡಿ ಸ್ವಾತಿ ಈ ವಿಚಾರವನ್ನು ವಿವರವಾಗಿ ಪೊಲೀಸರಿಗೆ ತಿಳಿಸಿದ್ದಾರೆ. ದೆಹಲಿ ಪೊಲೀಸರು ಹಲ್ಲೆ, ಕಿರುಕುಳ ಮತ್ತು ಬೆದರಿಕೆ ಸೆಕ್ಷನ್ಗಳಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ತಡರಾತ್ರಿ ಸ್ವಾತಿಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಪೊಲೀಸರು ವಿಭವ್ ಕುಮಾರ್ಗಾಗಿ ಹುಡುಕಾಟ ನಡೆಸಿದ್ದಾರೆ.
ಮೇ 13ರಂದು ಸ್ವಾತಿ ಮಲಿವಾಲ್ ಅರವಿಂದ್ ಕೇಜ್ರಿವಾಲ್ರನ್ನು ಭೇಟಿಯಾಗಲು ನಿವಾಸಕ್ಕೆ ಬಂದಿದ್ದರು. ಡ್ರಾಯಿಂಗ್ ರೂಮ್ನಲ್ಲಿ ಕಾಯುತ್ತಿರುವಾಗ ವಿಭವ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸ್ವಾತಿ ದೂರಿನಲ್ಲಿ ತಿಳಿಸಿದ್ದಾರೆ.