ಇಂಡಿಯ ಕಂದಾಯ ಉಪವಿಭಾಗಾಧಿಕರ ಸಬಾಭವನದಲ್ಲಿ ನಡೆದ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಮತದಾರರ ಸಂಖ್ಯೆ ಹೆಚ್ಚಳ ಕುರಿತು ಮಾಹಿತಿ ನೀಡಿದರು.

Abushama Hawaldar
ಇಂಡಿಯ ಕಂದಾಯ ಉಪವಿಭಾಗಾಧಿಕರ ಸಬಾಭವನದಲ್ಲಿ ನಡೆದ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಮತದಾರರ ಸಂಖ್ಯೆ ಹೆಚ್ಚಳ ಕುರಿತು ಮಾಹಿತಿ ನೀಡಿದರು.
WhatsApp Group Join Now
Telegram Group Join Now

ಇಂಡಿ : ತಾಲೂಕಿನ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು ೨,೫೩,೨೫೮ ಒಟ್ಟು ಮತದಾರರು ಇದ್ದಾರೆ. ಪ್ರಸಕ್ತ ವರ್ಷ ೨೫೫೩ ಮತದಾರರು ಹೆಚ್ಚಾಗಿದ್ದಾರೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.
ತಾಲೂಕಿನ ಎಸಿ ಕಚೇರಿಯಲ್ಲಿ ತಾಲೂಕಿನ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ೧,೩೦,೧೦೯ ಪುರುಷ ಮತದಾರರು, ೧,೨೩, ೧೩೫ ಮಹಿಳಾ ಮತದಾರರು, ಇತರೆ ೧೮ ಮತದಾರರು ಇದ್ದಾರೆ.
ಕಳೆದ ೨೦೨೩ ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿ ಮತಕ್ಷೇತ್ರದಲ್ಲಿ ೧, ೨೨ ೯೯೭ ಪುರುಷರು, ೧,೧೪ ೩೮೨ ಮಹಿಳೆಯರು ಇತರರು ೧೮ ಒಟ್ಟು ೨,೩೭೩೯೭ ಮತದಾರರಿದ್ದರು.
ಈ ಬಾರಿ ೨೫೫೩ ಮತದಾರರು ಹೆಚ್ಚಾಗಿದ್ದು ೬೫೯ ಮತದಾರರ ಹೆಸರನ್ನು ವರ್ಗಾವಣೆ ಅಥವಾ ಮರಣ ಹೊಂದಿದ ನಿಮಿತ್ಯ ತೆಗೆಯಲಾಗಿದೆ.
ತಾಲೂಕಿನಲ್ಲಿ ಪ್ರತಿ ಒಂದು ಸಾವಿರ ಪುರುಷರಿಗೆ ೯೪೭ ಮಹಿಳೆಯರು ಇದ್ದಾರೆ. ಬಹುತೇಕ ಈ ಹಿಂದೆಗಿAತಲೂ ಈ ಬಾರಿ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿದೆ. ೧೮ ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣೆ ಪ್ರಕ್ರಿಯೆಯಲ್ಲಿ ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವದಿಲ್ಲ. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಮುಖ್ಯವಾಗಿದೆ. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಅಬೀದ ಗದ್ಯಾಳ ತಿಳಿಸಿದ್ದಾರೆ.
ಸಭೆಯಲ್ಲಿ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಮತ್ತಿತರಿದ್ದರು.

WhatsApp Group Join Now
Telegram Group Join Now
Share This Article