ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

Ravi Talawar
ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್​ 29: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.

ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್​​​, ಐಡಿ ಕಾರ್ಡ್​ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್,​ 55 ಆಧಾರ್​ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್​ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್​ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್​ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

WhatsApp Group Join Now
Telegram Group Join Now
Share This Article