ಉಡುಪಿ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು (ಸೋಮವಾರ) ಮುಂಜಾನೆ ಜಿಲ್ಲೆಯ ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ನಟನ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.