ನಟ ಕಮಲ್ ಹಾಸನ್ ಅವರು ಸದ್ಯ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಕನ್ನಡದ ಬಗ್ಗೆ ಅವರು ನೀಡಿದ ದೋಷಪೂರಿತ ಹೇಳಿಕೆ ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಿರುವಾಗಲೇ ಕಮಲ್ ಹಾಸನ್ ಅವರು ರಾಜ್ಯಸಭೆ ಪ್ರವೇಶಿಸಲು ರೆಡಿ ಆಗಿದ್ದಾರೆ. ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ.
ನಟ ಕಮಲ್ ಹಾಸನ್ ರಾಜ್ಯಸಭೆ ಚುನಾವಣೆಗೆ ಡಿಎಂಕೆ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆ

ಡಿಎಂಕೆ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಸಲ್ಮಾ, ಪಿ. ವಿಲ್ಸನ್, ಎಸ್.ಆರ್. ಶಿವಲಿಂಗಂ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳಾಗಿ ಆಯ್ಕೆ ಆಗಿದ್ದಾರೆ. ಇದರ ಜೊತೆ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯಂ ಪಕ್ಷಕ್ಕೆ ಒಂದು ಸ್ಥಾನ ನೀಡಲಾಗಿದೆ. ಈ ಪಕ್ಷದಿಂದ ಕಮಲ್ ಹಾಸನ್ ಅವರನ್ನು ಆಯ್ಕೆ ಮಾಡಿರೋದಾಗಿ ಡಿಎಂಕೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.