ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
ಬಳ್ಳಾರಿ,ಅ.17ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿAದ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ(ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪೌರಾಡಳಿತ, ಹಜ್ ಸಚಿವರಾದ ರಹೀಂ ಖಾನ್ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ವೇದಿಕೆ ಸಿದ್ದತೆ, ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ಅಂದು ಹಂಪಿಯಿAದ ಜ್ಯೋತಿ ದೀಪ ತರಲಾಗುವುದು. ಬಳಿಕ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಮೆರವಣಿಗೆ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ವಿದ್ಯುತ್ ಅವಘಡ ಸಂಭವಿಸಿದAತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಗುವುದು. ನಗರದ ನಗರದಲ್ಲಿ ಸ್ವಚ್ಛತೆ, ಪ್ರಮುಖ ವೃತ್ತ ಮತ್ತು ರಸ್ತೆಗಳನ್ನು ದೀಪಾಲಂಕಾರದಿAದ ಅಲಂಕೃತಗೊಳಿಸಬೇಕು. ನವೆಂಬರ್ ತಿಂಗಳ ಮೊದಲ ಒಂದು ವಾರದ ಕಾಲ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕು ಎಂದರಲ್ಲದೇ, ಈ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಗೆ ಈ ಬಾರಿ ಆಯೋಜಿಸಲಾಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಸ್ವಾಗತಿಸಲು, ವಿವಿಧ ಶಾಲಾ-ಕಾಲೇಜು 1 ಲಕ್ಷ ವಿದ್ಯಾರ್ಥಿಗಳ ಮೂಲಕ ನಾಡಗೀತೆ ಹೇಳುವ ಮೂಲಕ ಕನ್ನಡದ ಕಲರವ ಮೊಳಗಬೇಕು. ರಾಜ್ಯೋತ್ಸವದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಭಾಷಣ, ಪ್ರಬಂಧ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಲೋಕೋಪಯೋಗಿ, ಜೆಸ್ಕಾಂ ಅಧಿಕಾರಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷಕರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.