ತುಮಕೂರು, ಆಗಸ್ಟ್ 31: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗುತ್ತಿಗೆದಾರರು ಶೇ 40ಕ್ಕೂ ಹೆಚ್ಚು ಕಮಿಷನ್ ನೀಡಿ ಬಿಲ್ ಪಡೆಯಬೇಕಾದ ಸ್ಥಿತಿ ಬಂದಿದೆ ಎಂದು ತುಮಕೂರು ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಎಡಿ ಬಲರಾಮಯ್ಯ ಆರೋಪಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸ್ಥಳೀಯ ಗುತ್ತಿಗೆದಾರರು ನೀಡಿದ ದೂರಿನ ಮೇರೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ಕೆಲವು ಎಂಜಿನಿಯರ್‌ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಜಲ ಜೀವನ್ ಮಿಷನ್ ಅಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ ಬಿಲ್‌ಗಳನ್ನು ಕ್ಲಿಯರ್ ಮಾಡಲು ಭಾರಿ ಮೊತ್ತದ ಲಂಚ ಕೇಳಿದ್ದರು ಎಂದು ತಿಳಿಸಿದ್ದಾರೆ.
ಕಮಿಷನ್ ಹಾವಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳದಿದ್ದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುವುದಾಗಿ ಬಲರಾಮಯ್ಯ ಹಾಗೂ ಸಂಘದ ಇತರ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.