ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ರೇವಣ್ಣ ಕೋರ್ಟ್ ಮುಂದೆ ಹಾಜರು

Ravi Talawar
ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ರೇವಣ್ಣ ಕೋರ್ಟ್ ಮುಂದೆ ಹಾಜರು
WhatsApp Group Join Now
Telegram Group Join Now

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದು ವಿಚಾರಣೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಮಹಿಳಾ ಪೊಲೀಸ್ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಮತ್ತು ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಿದರು. ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆ ಮಾಡಲಾಯಿತು.

ಮಹಿಳಾ ಪೊಲೀಸ್ ಅಧಿಕಾರಿಗಳ ಬೆಂಗಾವಲಿನಲ್ಲಿ ಅವರನ್ನು ಇಲ್ಲಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಪ್ರಜ್ವಲ್ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅವರನ್ನು ಬಂಧಿಸಿದೆ.

ಪ್ರಜ್ವಲ್ ವಿರುದ್ಧ ಇದುವರೆಗೆ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇಂದು ಮಧ್ಯಾಹ್ನ 3 ಗಂಟೆಗೆ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಲಿದೆ.

ಪ್ರಾಥಮಿಕವಾಗಿ ದೇಹದ ತೂಕ, ಬಣ್ಣ, ಮಧುಮೇಹ, ಬಿಪಿ, ರಕ್ತದ ಮಾದರಿ, ಮೂತ್ರ ಪರೀಕ್ಷೆಯನ್ನು ಮಾಡಲಾಗುತ್ತದೆ. ಇದು ಬಂಧನ ಸಂದರ್ಭದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಪ್ರಜ್ವಲ್ ರೇವಣ್ಣ ಆರೋಗ್ಯ ಸ್ಥಿತಿಯ ಬಗ್ಗೆ ಇಲ್ಲಿ ತಪಾಸಣೆ ಮಾಡಲಾಗುತ್ತದೆ. ಇದಾದ ಬಳಿಕ ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ.

WhatsApp Group Join Now
Telegram Group Join Now
Share This Article