ಬೆಳಗಾವಿ : ಇಂದು ವಿಧಾನ ಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಎತ್ತಿಕೊಳ್ಳಲು ನಿರ್ಧರಿಸಲಾಯಿತು. ಆದರೆ ಬಿಜೆಪಿ ಮುಖಂಡರಾದ ಆರ್. ಅಶೋಕ ಮತ್ತು ಸುನಿಲ ಕುಮಾರ ಅವರು ಪ್ರಶ್ನೋತ್ತರ ಕಲಾಪ ಬದಿಗಿಟ್ಟು ಉ.ಕ. ಸಮಸ್ಯೆಗಳ ಚರ್ಚೆಗೆ ತೆಗೆದುಕೊಳ್ಳಲು ಆಗ್ರಹಿಸಿದರು ಇದಕ್ಕೆ ಸಭಾಧ್ಯಕ್ಷರು ಒಂದು ಹಂತದಲ್ಲಿ ಒಪ್ಪಿದರು. ಆದರೆ ಬಸನಗೌಡ ಪಾಟೀಲರೇ ಇದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರಶ್ನೋತ್ತರ ಕಲಾಪ ಮುಗಿದ ನಂತರ ಉ.ಕ. ಸಮಸ್ಯೆಗಳ ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಪಟ್ಟು ಹೀಡಿದ ಪರಿಣಾಮ ಸಭಾಧ್ಯಕ್ಷರು ಪ್ರಶ್ನೋತ್ತರಗಳನ್ನು ಕೈಗೆತ್ತಿಕೊಂಡರು.
ಈ ಸಂದರ್ಭದಲ್ಲಿ ಹಿರಿಯ ಶಾಸಕರಿಗೆ ಮುಂದಿನ ಸಾಲಿನಲ್ಲಿ ಆಸನ ನೀಡಲು ಯತ್ನಾಳ ಆಗ್ರಹಿಸಿದರು. ಇದಕ್ಕೆ ಸಭಾಪತಿಗಳು ಸಮಜಾಯಿಸಿನೀಡಿದರು. ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದ ಯತ್ನಾಳ ಅವರು ಬಿಜೆಪಿ ನಾಯಕರಿಗೆ ಇರಿಸುಮುರಿಸು ಉಂಟುಮಾಡಿದರು.


