ಬಳ್ಳಾರಿ,ಜ.22- “ಸಮಗ್ರ ಕೃಷಿ – ಸ್ವಾವಲಂಬಿ ಕೃಷಿ” ಎಂಬ ದ್ಯೇಯದೊಂದಿಗೆ ಫೆ.05, 06 ಮತ್ತು 07 ರಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕೃಷಿ ಮೇಳ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಸಮಗ್ರ ಕೃಷಿ ಪದ್ದತಿ ಹಾಗೂ ಇತರೆ ಕುರಿತು ಅರಿವು ಮೂಡಿಸಲಾಗುತ್ತಿದ್ದು, ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳ ರೈತರು, ರೈತ ಮಹಿಳೆಯರು ಭಾಗವಹಿಸಿ, ಮೇಳದ ಸದುಪಯೋಗಪಡೆದುಕೊಳ್ಳಬೇಕು ಎಂದು ಬಳ್ಳಾರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.
ರಾಯಚೂರಿನಲ್ಲಿ ಫೆ.05 ರಿಂದ ಮೂರು ದಿನಗಳ ಕಾಲ ಕೃಷಿ ಮೇಳ


