ಅಹಮದಾಬಾದ್​ನಲ್ಲಿ ಎಐಸಿಸಿಯ ಮಹತ್ವದ ಸಭೆ

Ravi Talawar
ಅಹಮದಾಬಾದ್​ನಲ್ಲಿ ಎಐಸಿಸಿಯ ಮಹತ್ವದ ಸಭೆ
WhatsApp Group Join Now
Telegram Group Join Now

ಅಹಮದಾಬಾದ್, ಏಪ್ರಿಲ್ 08: ಇಂದಿನಿಂದ ಎರಡು ದಿನಗಳ ಕಾಲ ಗುಜರಾತ್​ನ ಅಹಮದಾಬಾದ್​ನಲ್ಲಿ ಎಐಸಿಸಿ (AICC)ಯ ಮಹತ್ವದ ಸಭೆ ನಡೆಯಲಿದೆ. ರಾಹುಲ್ ಗಾಂಧಿ(Rahul Gandhi), ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸುಮಾರು 169 ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಅಗತ್ಯ ಬದಲಾವಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಜಿಲ್ಲಾಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ಮತ್ತು ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಅವರ ಪಾತ್ರವನ್ನು ನಿರ್ಧರಿಸುವ ಬಗ್ಗೆ ಚರ್ಚೆ ನಡೆಯಬಹುದು.

ಏಪ್ರಿಲ್ 9 ರಂದು ಸಬರಮತಿ ನದಿಯ ದಡದಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲಿದೆ. ಇದರಲ್ಲಿ ಸುಮಾರು 2,500 ನಾಯಕರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸದಸ್ಯರು ಭಾಗವಹಿಸಲಿದ್ದಾರೆ. ಈ ಅಧಿವೇಶನದಲ್ಲಿ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ.

WhatsApp Group Join Now
Telegram Group Join Now
Share This Article