ಬಳ್ಳಾರಿ,ನ.25: ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡುತ್ತಿದೆ. ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ‘ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ’ ಎಂಬ ಮಾತನ್ನೇ ಪುನರುಚ್ಛರಿಸುತ್ತಿದ್ದಾರೆ. ಅವರ ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಅವರದ್ದೇ ಸರ್ಕಾರದ ದಾಖಲೆಗಳ ಆಧಾರದಲ್ಲಿ ಪರಿಶೀಲಿಸಿ ವಾಸ್ತವಾಂಶವನ್ನು ರಾಜ್ಯದ ಜನರ ಮುಂದಿಡಲು ಎಐಡಿಎಸ್‌ಓ ಕರ್ನಾಟಕ ರಾಜ್ಯ ಸಮಿತಿಯು ಮುಂದಾಗಿದೆ ಎಂದು ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಚ್ಚುತ್ತಿರುವ ೪೦ ಸಾವಿರ ಸರ್ಕಾರಿ ಶಾಲೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ೪೦,೦೦೦ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದರAತೆ ರಾಜ್ಯದಲ್ಲಿ ೬,೦೦೦ ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ ೮೦೦ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ.( ಗಣಿಬಾಧಿತ ಜಿಲ್ಲೆಗಳಲ್ಲಿ ೧೦೦, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ೨೦೦ ಹಾಗೂ ಇತರೆ ಭಾಗದಲ್ಲಿ ೫೦೦) ದಿ. ೧೫/೧೦/೨೦೨೫ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ.
ಈ ಯೋಜನೆಯನ್ನು Piಟoಣ ಠಿಡಿoರಿeಛಿಣ ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿAದ ೬ ಕಿಮೀ ವ್ಯಾಪ್ತಿಯೊಳಗಿರುವ, ೭೭ ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ೮೨ ವಿದ್ಯಾರ್ಥಿಗಳಿರುವ ಕನ್ನಿ ದೊಡ್ಡಿ ಶಾಲೆ, ೩೧ ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ, ೧೦೦ ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ, ೨೦ ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, ೮೦ ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ ಏPSಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ (ದಿ: ೨೩/೧೦/೨೦೨೫) ನೀಡಲಾಗಿದೆ. ತತ್ಪರಿಣಾಮ, ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ ೪೦,೦೦೦ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ.
ಇದಿಷ್ಟೇ ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.
ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ. ಮುಚ್ಚುತ್ತಿರುವ ೪೦,೦೦೦ ಸರ್ಕಾರಿ ಶಾಲೆಗಳ ಪಟ್ಟಿ ಸಂಪೂರ್ಣ ಪಟ್ಟಿಯನ್ನು ಎಐಡಿಎಸ್‌ಓ ನಾಡಿನ ಜನತೆಯ ಮುಂದೆ ಇಟ್ಟು, ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಕರಾಳ ವಾಸ್ತವವನ್ನು ಬಯಲಿಗೆಳೆದಿದೆ! ಈಗ ಸರ್ಕಾರದ ಉತ್ತರವೇನು ಎಂಬುದು ನಾಡಿನ ಜನತೆಯ ಪ್ರಶ್ನೆಯಾಗಿದೆ ಎಂದು ಹೇಳಿದರು.
ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕರಾದ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ ಸ್ವಾತಂತ್ರö್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್- ನೇತಾಜಿ ಸುಭಾಷ್ ಚಂದ್ರ ಬೋಸ್, ನಮ್ಮ ನಾಡಿನ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ಶಿಕ್ಷಣದ ಮೇಲೆ ಪ್ರಹಾರ ನಡೆಸಿದೆ. ಇದರ ವಿರುದ್ಧ ಪ್ರಬಲ ಹೋರಾಟವನ್ನು ಬೆಳೆಸಲು ಮತ್ತು ಎಲ್ಲ ರೀತಿಯ ತ್ಯಾಗಕ್ಕೆ ಸಿದ್ದರಾಗಲು ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗುವAತೆ ಎಐಡಿಎಸ್‌ಓ ಕರೆ ನೀಡುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ಕೂಡ ನಗರ ಹಾಗೂ ತಾಲೂಕು ಸೇರಿದಂತೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆಗೆಯುವ ಮೂಲಕ ಒಟ್ಟು ಸರ್ಕಾರಿ ಶಾಲೆಗಳನ್ನು ಮುಚ್ಚುವ ಪಟ್ಟಿಯಲ್ಲಿ ೪೨೧ ಸರ್ಕಾರಿ ಶಾಲೆಗಳಿವೆ ಎಂದರು.ಈ ಗೊಷ್ಠಿಯಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಖಜಾಂಚಿ ಅನುಪಮಾ ಮತ್ತು ಸದಸ್ಯರು ತಿಪ್ಪೇಸ್ವಾಮಿ, ಎ.ಕೆ ಮಂಜುನಾಥ, ಸೋಮಶೇಖರ್ ಉಪಸ್ಥಿತರಿದ್ದರು.


