ಧರ್ಮಸ್ಥಳ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎಐಎಂಎಸ್‌ಎಸ್ ಮನವಿ 

Ravi Talawar
ಧರ್ಮಸ್ಥಳ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎಐಎಂಎಸ್‌ಎಸ್ ಮನವಿ 
WhatsApp Group Join Now
Telegram Group Join Now
ಬಳ್ಳಾರಿ,ಜು.೨೩: ಧರ್ಮಸ್ಥಳ ವ್ಯಾಪ್ತಿಯಲ್ಲಿ ಜರುಗಿವೆ ಎನ್ನಲಾದ ಮಹಿಳೆಯರ ಕೊಲೆ, ಅತ್ಯಾಚಾರದಂತಹ ಆಘಾತಕಾರಿ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ಮತ್ತು ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ  ತಹಸೀಲ್ದಾರ್ ರೇಣುಕಾ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ೨೦ ವರ್ಷಗಳಲ್ಲಿ ನಡೆದಿವೆ ಎನ್ನಲಾದ ಅನೇಕಾನೇಕ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು, ಘೋರ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲುಕಿ ಜನತೆಯಲ್ಲಿ ತೀವ್ರ ಆತಂಕವನ್ನು ಹುಟ್ಟಿಸಿವೆ. ಅತ್ಯಾಚಾರಕ್ಕೊಳಗಾದ ನೂರಕ್ಕೂ ಹೆಚ್ಚು ಶಾಲಾ ಬಾಲಕಿಯರ, ಮಹಿಳೆಯರ ಶವಗಳನ್ನು ೧೯೯೫ರಿಂದ ೨೦೧೪ರ ನಡುವೆ ಅಲ್ಲಿ ಸುತ್ತಮುತ್ತ ಹೂತಿದ್ದೇನೆ ಎಂದು ಧರ್ಮಸ್ಥಳದ ಮಾಜಿ ಪೌರಕಾರ್ಮಿಕ ಎನ್ನಲಾದ ವ್ಯಕ್ತಿಯ ದೂರನ್ನು ಆಧರಿಸಿ ಎಫ್.ಐ.ಆರ್. ಮಾಡಲಾಗಿದೆ. ಅವರು ಹೂತಿರುವ ಬಹುಪಾಲು ಶವಗಳು ಬಾಲಕಿಯರು ಮತ್ತು ಮಹಿಳೆಯರದ್ದು ಎಂಬುದು ಬಹಳ ಆಘಾತಕಾರಿ ವಿಷಯವಾಗಿದೆ. ೨೦೧೦ರಲ್ಲಿ ಆತ ಶಾಲಾ ಬ್ಯಾಗ್ ಸಮೇತ ಹೂತಿದ್ದ ಸುಮಾರು ೧೨ವರ್ಷದ ಬಾಲಕಿಯ ಶವದ ನೆನಪು ಆತನಿಗೆ ನಿದ್ರಿಸಲು ಕೊಡದೆ ಈ ಎಲ್ಲಾ ವಿಷಯಗಳನ್ನು ಬಹಿರಂಗ ಪಡಿಸಲು ಪ್ರೇರೇಪಿಸಿರುವುದಾಗಿ ಆತ ಹೇಳಿಕೊಂಡಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅಲ್ಲದೆ ಈ ವಿಷಯಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಪಡುತ್ತಿವೆ. ಅಷ್ಟೇ ಅಲ್ಲದೆ, ಈ ಪ್ರಕರಣಗಳ ವಿರುದ್ಧ ಹಲವಾರು ವರ್ಷಗಳಿಂದ ಪ್ರತಿರೋಧಗಳು, ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇತ್ತೀಚೆಗಷ್ಟೆ ಈ ನೂರಾರು ಶವಗಳ ಸಮಾಧಿ ಪ್ರಕರಣಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು (ಎಸ್.ಐ.ಟಿ.) ವಿಶೇಷ ತನಿಖಾ ದಳವನ್ನು ನೇಮಿಸಿದೆ.
ತನ್ನ ಪಶ್ಚಾತ್ತಾಪದ ನೋವಿನಿಂದ ಹೊರಬರಲು ಮತ್ತು ಬಲಿಯಾದವರ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸುಮಾರು ಒಂದು ದಶಕದ ನಂತರ ತಾನು ಮುಂದೆ ಬಂದಿದ್ದೇನೆ ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾರೆ. ಅವರು ದೂರಿನಲ್ಲಿ, ಆತನನ್ನು ಮೇಲ್ವಿಚಾರಕರು ಶವಗಳು ಪತ್ತೆಯಾದ ನಿರ್ದಿಷ್ಟ ಸ್ಥಳಗಳಿಗೆ ಕರೆದು ವಿಲೇವಾರಿ ಮಾಡಲು ಹೇಳುತ್ತಿದ್ದರು. ಅವುಗಳಲ್ಲಿ ಹಲವು ಅಪ್ರಾಪ್ತ ಬಾಲಕಿಯರದ್ದಾಗಿದ್ದವು ಎಂದಿದ್ದಾರೆ. ಒಬ್ಬ ೨೦ ವರ್ಷದ ಮಹಿಳೆಯ ಮುಖವನ್ನು ಆಸಿಡ್‌ನಿಂದ ಸುಟ್ಟು, ಅವಳ ದೇಹವನ್ನು ಪತ್ರಿಕೆಯಿಂದ ಸುತ್ತಿಡಲಾಯಿತು ಮತ್ತು ಅವಳ ದೇಹವನ್ನು ಸುಡಲು ನನ್ನನ್ನು ಕೇಳಲಾಯಿತು. ಆತನನ್ನು ಶಾಶ್ವತವಾಗಿ ಕಾಡಿದ್ದ ಒಂದು ಘಟನೆ ೨೦೧೦ರಲ್ಲಿ ಕಲ್ಲೇರಿಯಲ್ಲಿ ಪೆಟ್ರೋಲ್ ಬಂಕ್‌ನಿAದ ಸುಮಾರು ೫೦೦ ಮೀಟರ್ ದೂರದಲ್ಲಿ ಶಾಲಾ ಸಮವಸ್ತ್ರ ಧರಿಸಿದ್ದ ೧೨ ರಿಂದ ೧೫ ವರ್ಷದೊಳಗಿನ ಹುಡುಗಿಯೊಬ್ಬಳು ಶವವಾಗಿ ಬಿದ್ದಿರುವುದು ಕಂಡುಬAದಿದೆ. ಅದನ್ನು ಹೂಳಬೇಕೆಂದು ಹೇಳಿದ್ದು. ಸುಮಾರು ಪ್ರಕರಣಗಳಲ್ಲಿ ಮುಖ ಸುಟ್ಟು, ಬಟ್ಟೆಗಳನ್ನು ಸುಟ್ಟು ಸಾಕ್ಷ್ಯ ನಾಶಮಾಡುವ ಹುನ್ನಾರಗಳು ನಡೆದಿವೆ ಎಂದಿದೆ.
‘ಆ ಹತ್ಯೆಗಳ ಹಿಂದಿನ ಬಲಿಪಶುಗಳು ಮತ್ತು ಅಪರಾಧಿಗಳನ್ನು ಬಹಿರಂಗಪಡಿಸುವುದು ನನ್ನ ಉದ್ದೇಶ” ಎಂದು ಅತ ವಿವರಿಸಿದ್ದಾರೆ.
ಹಾಗಾಗಿ ಈ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಶೀಘ್ರವಾಗಿ ಈ ನೂರಾರು ಸಾವುಗಳ ಕುರಿತು ಸಮಗ್ರ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಯಾರೇ ತಪ್ಪಿತಸ್ಥರು, ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಎಷ್ಟೇ ಪ್ರಭಾವಿ ವಲಯದವರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಹಾಗೂ ಎಲ್ಲಾ ಸಾಕ್ಷಿಗಳಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ರಕ್ಷಣೆ ನೀಡಬೇಕು. ಆತಂಕ, ನೋವು, ಆಕ್ರೋಶದಲ್ಲಿರುವ ಜನತೆಗೆ ಭರವಸೆ ನೀಡಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಈಶ್ವರಿ, ವಿಜಯಲಕ್ಷ್ಮಿ, ಅಹಲ್ಯ, ಗಿರಿಜಾ,  ವಿದ್ಯಾ, ಸೌಮ್ಯ ಮತ್ತಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article