ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

Ravi Talawar
ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ
WhatsApp Group Join Now
Telegram Group Join Now

ಮುಂಬೈ: ಇತ್ತೀಚಿನ ಲೋಕಸಭಾ ಚುನಾವಣೆ ಯಲ್ಲಿನ ಕಳಪೆ ಪ್ರದರ್ಶನದ ನಂತರ ಮಹಾರಾಷ್ಟ್ರ ದಲ್ಲಿ ಅಜಿತ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ ಗೆ ಮತ್ತೊಂದು ಆಘಾತ ಎದುರಾಗಿದೆ. ಪಿಂಪ್ರಿ ಚಿಂಚ್ವಾಡ್ ದ ನಾಲ್ವರು ಉನ್ನತ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರುವ ಸಾಧ್ಯತೆ ಇದೆ.

ಅಜಿತ್ ಪವಾರ್ ಅವರಿಗೆ ರಾಜೀನಾಮೆ ಸಲ್ಲಿಸಿದವರಲ್ಲಿ ಎನ್‌ಸಿಪಿಯ ಪಿಂಪ್ರಿ-ಚಿಂಚ್ವಾಡ್ ಘಟಕದ ಮುಖ್ಯಸ್ಥ ಅಜಿತ್ ಗವ್ಹಾನೆ ಕೂಡ ಸೇರಿದ್ದಾರೆ. ಪಿಂಪ್ರಿ ಚಿಂಚ್ವಾಡ್ ವಿದ್ಯಾರ್ಥಿ ಘಟಕದ ಮುಖ್ಯಸ್ಥ ಯಶ್ ಸಾನೆ, ಮಾಜಿ ಕಾರ್ಪೊರೇಟರ್‌ಗಳಾದ ರಾಹುಲ್ ಭೋಸಲೆ ಮತ್ತು ಪಂಕಜ್ ಭಲೇಕರ್ ರಾಜೀನಾಮೆ ನೀಡಿದ ಇತರ ನಾಯಕರು. ಅಜಿತ್ ಪವಾರ್ ಬಣದ ಕೆಲವು ನಾಯಕರು ಶರದ್ ಪವಾರ್ ಬಣಕ್ಕೆ ಮರಳಲು ಸಿದ್ಧರಾಗಿದ್ದಾರೆ ಎನ್ನುವ ವದಂತಿಯ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ಶರದ್ ಪವಾರ್ ಈ ಬಗ್ಗೆ ಮಾತನಾಡಿ, ತಮ್ಮ ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ಸೇರಿಸಿಕೊಳ್ಳುವುದಿಲ್ಲ. ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತರದ ನಾಯಕರನ್ನು ಸ್ವಾಗತಿಸುವುದಾಗಿ ತಿಳಿಸಿದ್ದರು. “ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ನಾವು ಸ್ವಾಗತಿಸುವುದಿಲ್ಲ. ಆದರೆ ಸಂಘಟನೆಯನ್ನು ಬಲಪಡಿಸಲು ಸಹಾಯ ಮಾಡುವ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ನಾಯಕರನ್ನು ಸೇರಿಸುತೇವೆ” ಎಂದು ಅವರು ಘೋಷಿಸಿದ್ದರು.

WhatsApp Group Join Now
Telegram Group Join Now
Share This Article