‘ಆಕಾಶ’ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

Ravi Talawar
‘ಆಕಾಶ’ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ
WhatsApp Group Join Now
Telegram Group Join Now

ದೆಹಲಿ,03: ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್​ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 186 ಪ್ರಯಾಣಿಕರಿದ್ದ ಆಕಾಶ ಏರ್ ದೆಹಲಿ-ಮುಂಬೈ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ಅಹಮದಾಬಾದ್‌ಗೆ ತಿರುಗಿಸಲಾಗಿತ್ತು.

ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿ, ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಮತ್ತು ಪ್ರಸ್ತುತ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ.

ಆಕಾಶ ಏರ್ ವಕ್ತಾರರ ಪ್ರಕಾರ ಬಾಂಬ್ ಬೆದರಿಕೆ ಬಂದ ನಂತರ ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.13 ಕ್ಕೆ ಸುರಕ್ಷಿತವಾಗಿ ಇಳಿದರು.

 

WhatsApp Group Join Now
Telegram Group Join Now
Share This Article