ವಾಹನಗಳಲ್ಲಿ ಕಣ್ಣುಕುಕ್ಕುವ ಎಲ್​ಇಡಿ ಲೈಟ್​ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮ : ಅಲೋಕ್ ಕುಮಾರ್

Hasiru Kranti
ವಾಹನಗಳಲ್ಲಿ ಕಣ್ಣುಕುಕ್ಕುವ ಎಲ್​ಇಡಿ ಲೈಟ್​ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮ : ಅಲೋಕ್ ಕುಮಾರ್
WhatsApp Group Join Now
Telegram Group Join Now

ಜುಲೈನಲ್ಲಿ ವಿಶೇಷ ಕಾರ್ಯಾಚರಣೆ

ಬೆಂಗಳೂರು, ಜೂನ್ 20: ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್​ಗಳನ್ನು ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು   ಮುಂದಾಗಿದ್ದಾರೆ. ಈ ರೀತಿಯ ಲೈಟ್​ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್​ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ.

ರಸ್ತೆ ಅಪಘಾತಗಳನ್ನು ತಪ್ಪಿಸಲು ‘ಕೇಂದ್ರ ಮೋಟಾರು ವಾಹನಗಳ ನಿಯಮ’ಗಳ ಅಡಿಯಲ್ಲಿ ಅನುಮತಿ ನೀಡಿರುವ ದೀಪಗಳನ್ನು (ಹೆಡ್‌ಲೈಟ್) ಮಾತ್ರ ವಾಹನಗಳಿಗೆ ಅಳವಡಿಸಬೇಕು. ಹೆಚ್ಚು ಬೆಳಕು ನೀಡುವ ಈ ಎಲ್‌ಇಡಿ ಲೈಟ್ಸ್‌ಗಳನ್ನು ನಿಮ್ಮ ವಾಹನಗಳಿಗೆ ಅಳವಡಿಕೆ ಮಾಡುವುದರಿಂದ ಎದುರುಗಡೆ ಬರುವ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಆದ್ದರಿದ ಈ ಲೈಟ್‌ಗಳ ಅಳವಡಿಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಆದೇಶ ಪಾಲನೆ ಆಗದಿದ್ದರೆ ಜುಲೈನಿಂದ ದಂಡ ಹೇರಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಲು, ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್​ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಲೋಕ್ ಕುಮಾರ್ ‘ಎಎನ್​ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾವು ವಾಹನಗಳಲ್ಲಿ ಎಲ್​ಇಡಿ ಲೈಟ್​ಗಳನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಿಲ್ಲ. ಆದರೆ, ವಾಹನಗಳಲ್ಲಿ ಕಣ್ಣುಕುಕ್ಕುವಂಥ ಲೈಟ್​​ಗಳನ್ನು ಬಳಸುತ್ತಿದ್ದರೆ ಮತ್ತು ವಾಹನಗಳಲ್ಲಿ ಅಳವಡಿಸಿರುವ ಲೈಟ್​​ಗಳು ಇತರ ಚಾಲಕರಿಗೆ ತೊಂದರೆಯನ್ನು ಉಂಟು ಮಾಡುವಂತೆ ಇದ್ದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ನಾವು ಸೂಚಿಸುತ್ತಿದ್ದೇವೆ. ಎಲ್ಇಡಿ ಲೈಟ್​​ಗಳು ಇತರ ಚಾಲಕರಿಗೆ ಸಮಸ್ಯೆ ಉಂಟುಮಾಡುತ್ತವೆ. ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ಆದೇಶದಲ್ಲೇನಿದೆ?

ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್​​ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ.

ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಲಾರಿ, ಟ್ರಕ್, ಕಾರು, ಅಷ್ಟೇ ಅಲ್ಲದೇ ಬೈಕ್‌ಗಳೂ ಸಹ ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಿಕೊಂಡಿದ್ದನ್ನು ನೋಡಬಹುದು. ಇವುಗಳ ಪ್ರಖರ ಬೆಳಕು ಇನ್ನಿತರ ವಾಹನಗಳ ಚಾಲಕರಿಗೆ ತೊಂದರೆ ಕೊಡುತ್ತಿವೆ. ಕಣ್ಣಿಗೆ ಕುಕ್ಕುತ್ತವೆ. ಆದ್ದರಿಂದ ಇನ್ನು ಮುಂದೆ ಇಂತಹ ಲೈಟ್‌ಗಳನ್ನು ಬಳಸಬಾರದು. ಎಲ್ಲ ವಾಹನಗಳ ಚಾಲಕರು ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.

ಮಾರ್ಗಸೂಚಿ ಪಾಲಿಸದಿದ್ದರೆ ಐವಿಎಂ ಕಾಯ್ದೆ ಕಲಂ 177 ರಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ಜುಲೈ 31ರಂದು ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.

 

WhatsApp Group Join Now
Telegram Group Join Now
Share This Article