ಎಂಟು ತಿಂಗಳ ಗರ್ಭಿಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ

Ravi Talawar
ಎಂಟು ತಿಂಗಳ ಗರ್ಭಿಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ
WhatsApp Group Join Now
Telegram Group Join Now

ಚಿಕ್ಕೋಡಿ: ಎಂಟು ತಿಂಗಳ ಗರ್ಭಿಣಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಗ್ರಾಮದ ಮಹಿಳೆ ಸುವರ್ಣ ಮಠಪತಿ (37) ಕೊಲೆಯಾದ ತುಂಬು ಗರ್ಭಿಣಿ. ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಕೊಲೆಯಿಂದಾಗಿ ಕುಟುಂಬಕ್ಕೆ ಬರಸಿಡಿಲು ಬಡದಂತಾಗಿದೆ. ಹೆತ್ತ ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅಥಣಿ ಪೊಲೀಸರು ಹಾಗೂ ಬೆಳಗಾವಿ ಹೆಚ್ಚುವರಿ ಎಸ್​ಪಿ ಶೃತಿ ಎಸ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ: ಕೊಲೆಯಾದ ಮಹಿಳೆಯದ್ದು ಬಡ ಕುಟುಂಬ. ಪತಿಯು ಗ್ರಾಮ ದೇವತೆಯ ಅರ್ಚಕರಾಗಿ ಕೆಲಸ ಮಾಡಿಕೊಂಡು ಜೀವನ ಸಲಹುತ್ತಿದ್ದರು. ಮಹಿಳೆಯ ಪತಿ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೋಟದಿಂದ ಮೇವು ತಂದ ಪತಿಯು ತನ್ನ ಪತ್ನಿಯನ್ನು ಕರೆದರೂ ಮನೆಯಿಂದ ಹೊರಗೆ ಬಂದಿಲ್ಲ. ಆಗ ಸಮೀಪ ಬಂದು ನೋಡಿದಾಗ ಗರ್ಭಿಣಿಯು ರಕ್ತದ ಮಡಿಲಿನಲ್ಲಿ ಬಿದ್ದು ನರಳಾಡುತ್ತಿರುವುದು ಕಂಡುಬಂದಿದೆ.

WhatsApp Group Join Now
Telegram Group Join Now
Share This Article