ಎನ್ಐಎ ವಾಹನದ ಮೇಲೆ ದಾಳಿ: ಬಾಂಬ್ ಸ್ಫೋಟ ಪ್ರಕರಣದ ತನಿಖೆ ವೇಳೆ ಪಶ್ಚಿಮ ಬಂಗಾಳದಲ್ಲಿ ಘಟನೆ

Ravi Talawar
ಎನ್ಐಎ ವಾಹನದ ಮೇಲೆ ದಾಳಿ: ಬಾಂಬ್ ಸ್ಫೋಟ ಪ್ರಕರಣದ ತನಿಖೆ ವೇಳೆ ಪಶ್ಚಿಮ ಬಂಗಾಳದಲ್ಲಿ ಘಟನೆ
WhatsApp Group Join Now
Telegram Group Join Now

ಕೋಲ್ಕತ್ತ,ಏ.06: ಎನ್ಐಎ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆದಿದೆ.  ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ 2022 ರ ಬಾಂಬ್ ಸ್ಫೋಟ ಪ್ರಕರಣದ ತನಿಖೆಗೆ ಎನ್ಐಎ ಅಧಿಕಾರಿಗಳು ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳ ಹೇಳಿಕೆಯಿಂದ ತಿಳಿದುಬಂದಿದೆ.

“ಸ್ಥಳೀಯರು ವಾಹನವನ್ನು ಘೇರಾವ್ ಮಾಡಿದರು ಮತ್ತು ಅದರ ಮೇಲೆ ಕಲ್ಲು ತೂರಿದರು. ಘಟನೆಯಲ್ಲಿ ಎನ್‌ಐಎ ತನ್ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದೆ. ಈ ಸಂಬಂಧ ಎನ್‌ಐಎ ಪೊಲೀಸ್‌ ದೂರು ಕೂಡ ದಾಖಲಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯೆಗಳಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಲಭ್ಯವಿರಲಿಲ್ಲ. ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಇಬ್ಬರು ಬಂಧಿತ ವ್ಯಕ್ತಿಗಳೊಂದಿಗೆ ಎನ್‌ಐಎ ತಂಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಈ ಘಟನೆಯು ಜನವರಿ 5 ರಂದು ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ದಾಳಿಯ ಸಂದರ್ಭದಲ್ಲಿ ಉತ್ತರ 24 ಪರಗಣಗಳ ಸಂದೇಶಖಾಲಿ ಪ್ರದೇಶದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದನ್ನು ನೆನಪು ಮಾಡಿದೆ.

 

WhatsApp Group Join Now
Telegram Group Join Now
Share This Article