ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ

Ravi Talawar
ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 20: ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ (Electricity Price Hike)  ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಇಂಧನ ಇಲಾಖೆ ಮುಂದಾಗಿದ್ದರ ಪರಿಣಾಮವೇ ಈ ದರ ಏರಿಕೆಯಾಗಿದೆ. ಅಂದರೆ, ಗ್ರಾಹಕರ ಮಾಸಿಕ ಬಿಲ್​ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.

ವಿದ್ಯುತ್ ದರ ಹೆಚ್ಚಳ ಸಂಬಂಧ ‘ಟಿವಿ9’ ಜತೆ ಮಾತನಾಡಿದ ಸಚಿವ ಶರಣಪ್ರಕಾಶ್‌ ಪಾಟೀಲ, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ ಎಂದರು.

 

WhatsApp Group Join Now
Telegram Group Join Now
Share This Article