ಮೈಸೂರು: ಗೃಹ ಪ್ರವೇಶದಲ್ಲಿ ಊಟ ತಿಂದ ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ. ಮೈಸೂರಿನ ಮಾರ್ಬಳ್ಳಿಯಲ್ಲಿ ಘಟನೆ ನಡೆದಿದೆ.
ಮಾರ್ಬಳ್ಳಿಯಲ್ಲಿ ನಿನ್ನೆ ಭಾನುವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮವಿತ್ತು. ಈ ಗೃಹ ಪ್ರವೇಶ ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದರು. ಊಟದ ಬಳಿಕ ಸುಮಾರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿತ್ತು.
ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.