ಹುಬ್ಬಳ್ಳಿ, ಮೇ 22: ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜಲಿ ಅಂಬಿಗೇರ (20) ಕೊಲೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಜೊತೆಗೂ ಅನುಚಿತವಾಗಿ ವರ್ತಿಸಿದ್ದಾನೆ.
ನರ್ಸ್ ಚಿಕಿತ್ಸೆ ಕೊಡುವಾಗ ವಿಶ್ವ ಹುಚ್ಚಾಟವಾಡಿದ್ದಾನೆ. ಅಲ್ಲದೆ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದ ಆಯಾಗೆ ಧಮ್ಕಿ ಹಾಕಿದ್ದಾನೆ. ಇದರಿಂದ ಕಿಮ್ಸ್ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಹೀಗಾಗಿ ವಿಶ್ವ ಚಿಕಿತ್ಸೆ ಪಡೆಯುತ್ತಿದ್ದ ಕೊಠಡಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಏಳು ಜನ ಪೊಲೀಸರನ್ನು ನಿಯೋಜಿಸಲಾಗಿದೆ.
ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹುಬ್ಬಳ್ಳಿಗೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಅಂಜಲಿಯನ್ನು ಹತ್ಯೆ ಮಾಡಿರುವ ಆರೋಪಿಯಿಂದಲೂ ಸಿಐಡಿ ಅಧಿಕಾರಿಗಳು ಹೇಳಿಕೆ ಪಡೆದಿದ್ದಾರೆ.