ಬೈಲಹೊಂಗಲ. ತಾಲೂಕಿನ ಆನಿಗೋಳ ಗ್ರಾಮದಲ್ಲಿ ಜ್ಞಾನ ಸಾಗರ, ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ರತ್ನ ಮಾರುತಿ ದಳವಾಯಿ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟಕರಾಗಿ ಧಾರವಾಡ ಪ್ರಾದೇಶಿಕ ಕಚೇರಿ ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಮೇಡಂ ಅವರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಶೈಲಾ ಜೆ ಮಾತನಾಡಿ ತಾಲೂಕಿನಲ್ಲಿ ನಡೆಯುವ ೨೫ ಜ್ಞಾನವಿಕಾಸ ಕೇಂದ್ರಗಳ ವಿಶೇಷ ಕಾರ್ಯಕ್ರಮಗಳ ಬಗ್ಗೆ ಮತ್ತು ಮಾಹಿತಿ ತಿಂಗಳ ಮಾಹಿತಿ ಕಾರ್ಯಕ್ರಮಗಳ ಕುರಿತು ಮತ್ತು ಆಟೋ ಸ್ಪರ್ಧೆಗಳ ಜಾನಪದ ಗೀತೆ, ಏಕಾಭಿನಯ ಪಾತ್ರ ಮಾಡುವ ಮೂಲಕ ಈ ಮಹಿಳೆಯರು ಕಾರ್ಯಕ್ರಮ ಅತ್ಯುತ್ತಮವಾಗಿ ನಿರ್ವಹಣೆ ಮಾಡಿರುತ್ತಾರೆ ಎಂದು ಹೇಳಿದರು. ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿಗಳು ಕಾರ್ಯಕ್ರಮ ಉದ್ದೇಶಿಸಿ ಕ್ಷೇತ್ರದಿಂದ ನಡೆಯುವಂತಹ ಜ್ಞಾನ ವಿಕಾಸ ಕಾರ್ಯಕ್ರಮದ ಹಿನ್ನೆಲೆ ಮತ್ತು ಮಹಿಳೆಯರಲ್ಲಿ ಸಾವಲಂಬನೆ ಬದುಕು ಕಟ್ಟಿಕೊಳ್ಳಲು ಉದ್ಯೋಗ ಮೂಲಕ ಮಕ್ಕಳಲ್ಲಿ ಸಂಸ್ಕಾರ ಸಂಸ್ಕೃತಿಗೆ ಬೆಳೆಸುವಲ್ಲಿ ತಾಯಂದಿರ ಕರ್ತವ್ಯಗಳ ವಾತ್ಸಲ್ಯ ಮಾಶಾಸನ ಜನಮಂಗಳ ಕಾರ್ಯಕ್ರಮ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಆಗುವ ಕಾರ್ಯಕ್ರಮದ ಮಾಹಿತಿ ನೀಡಿದರು.