ಬಳ್ಳಾರಿ ಶ್ರೀ ಕನಕದುರ್ಗಮ್ಮ ದೇವಸ್ಥಾನದ ವಾರ್ಷಿಕ ಸಿಡಿಬಂಡಿ ರಥೋತ್ಸವ: ಫೆ.09 ರಂದು ಪೂರ್ವಭಾವಿ ಸಿದ್ಧತಾ ಸಭೆ

Sandeep Malannavar
ಬಳ್ಳಾರಿ ಶ್ರೀ ಕನಕದುರ್ಗಮ್ಮ ದೇವಸ್ಥಾನದ ವಾರ್ಷಿಕ ಸಿಡಿಬಂಡಿ ರಥೋತ್ಸವ: ಫೆ.09 ರಂದು ಪೂರ್ವಭಾವಿ ಸಿದ್ಧತಾ ಸಭೆ
WhatsApp Group Join Now
Telegram Group Join Now

ಬಳ್ಳಾರಿ,ಫೆ.07.-ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ವಾರ್ಷಿಕ ಸಿಡಿಬಂಡಿ ರಥೋತ್ಸವು ಫೆ.24 ರಂದು ಜರುಗಲಿದ್ದು, ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರು, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ನೈರ್ಮಲೀಕರಣ, ಸ್ವಚ್ಛತೆ, ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಒದಗಿಸುವುದು, ದರ್ಶನ-ಧಾರ್ಮಿಕ ಕಾರ್ಯಗಳು ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಲು ಫೆ.09 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಯಾತ್ರಿ ನಿವಾಸದ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಆಯೋಜಿಸಲಾಗಿದೆ.
ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶ್ರೀ ಕನಕದುರ್ಗಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article