ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Ravi Talawar
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​​ 23: ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ಹೊರಡಿಸಿರೋ ಪ್ರಾಸಿಕ್ಯೂಷನ್ ಸರ್ಕಾರ ಮತ್ತು ಗವರ್ನರ್‌ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ, ಕೊಂಚ ರಿಲೀಫ್ ಸಿಕ್ಕಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್​ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

1494 ಕೋಟಿ ರೂ. ಹಣ ಎಲ್ಲಿದೆ, ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ವಿಧಾನಸೌಧದಲ್ಲಿ ವಿಧಾನಪರಿಷತ್​ನ​ ಬಿಜೆಪಿ ಸದಸ್ಯ ಅರುಣ್​ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. 2022-23ರ ಅವಧಿಯಲ್ಲಿ ನಮ್ಮ ಸರ್ಕಾರದ ಅಧಿಕಾರದಲ್ಲಿ ಇತ್ತು. ಜಿಲ್ಲಾ ಮತ್ತು ತಾಲೂಕು ಪಂಚಾಯತ್​ಗಳಲ್ಲಿ ಎಷ್ಟು ಹಣ ಬಳಕೆ ಆಗಿದೆ. ಉಳಿದ ಮೊತ್ತ ಯಾವುದಕ್ಕೆ ಉಪಯೋಗ ಮಾಡಿದ್ದೆ ಅಂತಾ ಪ್ರಶ್ನೆ ಮಾಡಿದ್ದೇನೆ. 1953 ಕೋಟಿ ರೂ. ಹಣ ಇತ್ತು, ಸಂಚಿತ ನಿಧಿಗೆ ಉಳಿದ ಹಣ ಹೋಗಬೇಕು. ಹಣ ಬಳಕೆ ಮಾಡಬೇಕೆಂದ್ರೆ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article