ಗದಗ(ಕರ್ನಾಟಕ ವಾರ್ತೆ)ಅ. 02:ಸಸಿ ನೆಡುವುದರ ಜೊತೆಗೆ ಅದರ ಪಾಲನೆ ಪೋಷಣೆ ಮಾಡುವುದು ಅತ್ಯವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಸಿ ನೆಡುವ
ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಗಿಡಗಳನ್ನು ನಡೆವುದರ ಮೂಲಕ ಪರಿಸರವನ್ನು ಕಾಪಾಡಬೇಕು. ಕೇವಲ ಸಸಿ ನೆಡುವುದು ಮಾತ್ರವಲ್ಲದೇ ಅವುಗಳನ್ನು ಪಾಲನೆ ಪೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್ ಶೆಟ್ಟಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾಶಿಮ ಚೂರಿಖಾನ್, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್ ಬೆನಕಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿ.ಜೆ.ಎಂ. ಜಿ.ಆರ್. ಶೆಟ್ಟರ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ಸುನೀಲ ತಳವಾರ, ಜೆಎಂಎಫ್‍ಸಿ 1 ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜೆಎಂಎಫ್‍ಸಿ 2 ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ ಅವರು ಹಾಗೂ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಆರ್.ವೈ. ಕಾಂಬಳೆ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿಪಾಟೀಲ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ವಕೀಲರಾದ ವೈ.ಆರ್. ಗುಡೂರ, ಕೆ.ಪಿ. ಕೋಟಿಗೌಡ್ರ, ಎಂ.ಎ. ಸಂಗನಾಳ, ಎ.ಡಿ. ಬಡಿಗೇರ, ಎಸ್.ಎ. ಸಂಗನಾಳ ಹಾಗೂ ವಕೀಲ ವೃಂದದವರು, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಆರ್.ವೈ. ಕಾಂಬಳೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ, ನ್ಯಾಯಾಲಯಗಳ ಸಿಬ್ಬಂದಿ ಉಪಸ್ಥಿತರಿದ್ದರು