ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Ravi Talawar
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬಳ್ಳಾರಿ,ಮೇ 14 ತಾಲ್ಲೂಕಿನ ಕೊಳಗಲ್ಲು (ಅಲ್ಲಿಪುರ) ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ (11ನೇ ತರಗತಿ)ಗೆ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ಮಾತ್ರ) ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು, ಇತರೆ ಸಮುದಾಯಕ್ಕೆ ಶೇ.25 ರಷ್ಟು ಮೀಸಲಾತಿ ಇದೆ.ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರುಗಳು ವಸತಿ ಶಾಲೆಗೆ ಖುದ್ದಾಗಿ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಉಚಿತವಾಗಿ ಅರ್ಜಿ ಪಡೆದು, ಭರ್ತಿ ಮಾಡಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿಯೂ ಅರ್ಜಿಗಳನ್ನು ಪಡೆಯಬಹುದು.

ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು (ಅಲ್ಲಪುರ) ಕೊಳಗಲ್ಲು, ಪ್ರಾಂಶುಪಾಲರ ಕಚೇರಿ ಅಥವಾ ಮೊ.7349008289 ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಅವರ ಮೊ.8746818180 ಗೆ ಸಂಪರ್ಕಿಸಬಹುದು.

*ತಾಲ್ಲೂಕುವಾರು ಮಾಹಿತಿ ಕೇಂದ್ರ:*
ಬಳ್ಳಾರಿ-8310321101, ಸಂಡೂರು-9036925966,8660575061 ಮತ್ತು ಸಿರುಗುಪ್ಪ-9148889975.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಥವಾ ದೂ.08392-200125/224 ಗೆ ಸಂಪರ್ಕಿಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article