ಬೆಂಗಳೂರು, ಮೇ 28: ಆರ್ಮಿ ಕ್ಯಾಂಟೀನ್ಗಳಿಗೆ ಪೂರೈಕೆ ಮಾಡುವ ಮದ್ಯದ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂಬ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ಸಿನ ಸಂಭ್ರಮ ಆಚರಣೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಮಿ ಕ್ಯಾಂಟೀನ್ ವಸ್ತುಗಳಿಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಕ್ಯಾಂಟೀನ್ಗಳಿಗೆ ಕರ್ನಾಟಕ ಸರ್ಕಾರ ಎಕ್ಸೈಸ್ ಡ್ಯುಟಿ ವಿಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಹಾಗೆ, ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಮಂತ್ರಿಗಳು ಈ ವಿಚಾರವನ್ನು ಘೋಷಣೆ ಮಾಡುತ್ತಿದ್ದಂತೆಯೇ ಸಭೆಯಲ್ಲಿ ನೆರದಿದ್ದವರು ಚಪ್ಪಾಳೆ ಮೂಲಕ ಸ್ವಾಗತಿಸಿದರು.