ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ಸೆಪ್ಟೆಂಬರ್ 10 ರ ವರೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ

Ravi Talawar
ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ಸೆಪ್ಟೆಂಬರ್ 10 ರ ವರೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ
WhatsApp Group Join Now
Telegram Group Join Now

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಸೆಪ್ಟೆಂಬರ್ 5 ರಿಂದ 10 ರ ವರೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.

ಸೆಪ್ಟೆಂಬರ್ 5 ರಿಂದ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ 1,500 ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್ ಆರ್ ಟಿಸಿ ಸೋಮವಾರ ತಿಳಿಸಿದೆ.

ಸೆಪ್ಟೆಂಬರ್ 6ರಂದು ಶುಕ್ರವಾರ ಗೌರಿ ಹಬ್ಬ, 7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸಪ್ಟೆಂಬರ್ 5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್​​ಗಳನ್ನು ನಿಯೋಜಿಸಲಾಗಿದೆ.

ಕೆಎಸ್‌ಆರ್‌ಟಿಸಿ ಪ್ರಕಾರ, ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಕಲಬುರಗಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ.

WhatsApp Group Join Now
Telegram Group Join Now
Share This Article