ಯುಗಾದಿ, ರಂಜಾನ್ ಸಾಲು ಸಾಲು ರಜೆ: ಪ್ರಯಾಣಿಕರಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ

Ravi Talawar
ಯುಗಾದಿ, ರಂಜಾನ್ ಸಾಲು ಸಾಲು ರಜೆ: ಪ್ರಯಾಣಿಕರಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್​ 05:  ಯುಗಾದಿ ಮತ್ತು ರಂಜಾನ್ ಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ.

ಕೆಎಸ್‍ಆರ್ ಟಿವಿಶೇಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ 145 ಬಸ್, ಕೆಕೆಆರ್‍ ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ.13 ಎರಡನೇ ಶನಿವಾರ ರಜೆ ಹಾಗೂ 14ರಂದು ಭಾನುವಾರದ ರಜೆ ಇದೆ. ಕೆಲವರು ರಜೆ ಹಾಕಿ ಊರಿಗೆ ತೆರಳಲು ತಯಾರಿ ನಡೆಸಿದ್ದಾರೆ. ಒಟ್ಟು 5 ರಜೆಗಳು ಸಿಗಲಿದೆ.

ವಿದ್ಯಾರ್ಥಿಗಳಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಲು ತಯಾರಿ ನಡೆಸಿರುವ ಪೋಷಕರಿಗೆ ಇದು ಅನುಕೂಲವಾಗಲಿದೆ. ಈ ಎಲ್ಲ ಕಾರಣಗಳನ್ನು ಮತ್ತು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ.

ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್‍ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

 

WhatsApp Group Join Now
Telegram Group Join Now
Share This Article