ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ: ಅಂತಿಮ ದರ್ಶನಕ್ಕೆ ವ್ಯವಸ್ಥೆ

Ravi Talawar
ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ: ಅಂತಿಮ ದರ್ಶನಕ್ಕೆ ವ್ಯವಸ್ಥೆ
WhatsApp Group Join Now
Telegram Group Join Now
ಧಾರವಾಡ,ಮಾ27: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ  ಅವರು ಮಂಗಳವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಧಾರವಾಡ ಸಪ್ತಾಪುರ ದುರ್ಗಾ ಕಾಲೊನಿಯ ನಿವಾಸದಲ್ಲಿ ಕಾಪಸೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಾಪಸೆ ಅವರು 1928ರ ಎಪ್ರಿಲ್ 2 ರಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲೋಣಿ ಬಿ.ಕೆ. ಯಲ್ಲಿ ಜನಿಸಿದ್ದರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾಗಿದ್ದರು. ಹಲಸಂಗಿ ಗೆಳೆಯರು, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಶಾಲ್ಮಲೆಯಿಂದ ಗೋದಾವರಿ ವರೆಗೆ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಕವಿ ರವಿಂದ್ರರು, ಶಿ.ಶಿ.ಬಸವನಾಳ ಎಂಬ ಮಕ್ಕಳ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.

ಕಾಪಸೆ ಅವರ ಸಾಹಿತ್ಯ ಸಾಧನೆಗೆ ವರದರಾಜ ಆದ್ಯ ಪ್ರಶಸ್ತಿ, ಆನಂದಕಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಒಲಿದುಬಂದಿವೆ. ಇವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಗುರುಲಿಂಗ ಕಾಪಸೆ ಅವರ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟಬಲ್ ಟ್ರಸ್ಟ್ ಬೈಲಹೊಂಗಲದ ಮುಖಾಂತರ ಕೆಎಲ್ಇ ಆಯುರ್ವೇದ ಮಹಾವಿದ್ಯಾಲಯ ಬೆಳಗಾವಿಗೆ ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

 

WhatsApp Group Join Now
Telegram Group Join Now
Share This Article