ಬೆಂಗಳೂರು, ಜನವರಿ 6: ನಿಷೇಧಿತ ಪಿಎಫ್‌ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿನ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ.
ಆರೋಪಿಯು ದುಬೈನಿಂದ ಬಿಹಾರದ ಪಿಎಫ್‌ಐ ಕಾರ್ಯಕರ್ತರಿಗೆ ಬರುತ್ತಿದ್ದ ದುಡ್ಡನ್ನು ಕರ್ನಾಟಕ ಮತ್ತು ಕೇರಳ ಮೂಲದ ತಂಡಗಳ ಮೂಲಕ ಅಕ್ರಮವಾಗಿ ರವಾನಿಸುತ್ತಿದ್ದ. ನಿಷೇಧಿತ ಸಂಘಟನೆಯ ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತೇಜಿಸಲು ಹಣವನ್ನು ಬಳಸಲಾಗಿತ್ತು ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.