ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್

Ravi Talawar
ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್
WhatsApp Group Join Now
Telegram Group Join Now
ಚುಟು ಚುಟು ಚೆಲುವೆ ಆಶಿಕಾ ರಂಗನಾಥ್ ಕನ್ನಡದ ಜೊತೆಗೆ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಜೂನಿಯರ್ ಎನ್ ಟಿಆರ್ ಸಹೋದರ ಕಲ್ಯಾಣ್ ರಾಮ್ ಅಭಿನಯದ ಅಮಿಗೋಸ್‌ ಸಿನಿಮಾ ಮೂಲಕ ತೆಲುಗಿಗೆ ಎಂಟ್ರಿ ಕೊಟ್ಟಿದ್ದ  ಆಶಿಕಾ ಆ ಬಳಿಕ  ನಾ ಸಾಮಿ ರಂಗ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿ ನಟಿಸಿದ್ದರು. ಈಗ ಮೆಗಾ ಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ.
ಚಿರು ಅಭಿನಯಿಸುತ್ತಿರುವ ‘ವಿಶ್ವಂಭರ’ ಚಿತ್ರದಲ್ಲಿ ಚುಟುಚುಟು ಚೆಲುವೆ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್​ ನಟಿಸಲಿದ್ದಾರೆ. ಯು ವಿ ಕ್ರಿಯೇಷನ್ ಬ್ಯಾನರ್ ನಡಿ ವಿಕ್ರಮ್, ವಂಶಿ ಹಾಗೂ ಪ್ರಮೋದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಬಿಂಬಿಸಾರ ಚಿತ್ರ ನಿರ್ದೇಶಿಸಿದ್ದ ವಸಿಷ್ಠ ವಿಶ್ವಂಭರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚೋಟಾ ಕೆ ನಾಯ್ಡು ಛಾಯಾಗ್ರಹಣ, ರಾಮ ಲಕ್ಷ್ಮಣ ಸಾಹಸ ನಿರ್ದೇಶನವಿರುವ ‘ವಿಶ್ವಂಭರ’ ಚಿತ್ರ 2025ರ ಸಂಕ್ರಾಂತಿ ಹಬ್ಬಕ್ಕೆ  ಬಿಡುಗಡೆಯಾಗಲಿದೆ.

WhatsApp Group Join Now
Telegram Group Join Now
Share This Article