ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ

Ravi Talawar
ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ
WhatsApp Group Join Now
Telegram Group Join Now

ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಥಮ ಅಧ್ಯಕ್ಷರನ್ನಾಗಿ ಅಶೋಕ ಕೆ. ಮಂದಾಲಿ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.

ಪ್ರಸ್ತುತ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿರುವ ಅಶೋಕ ಮಂದಾಲಿ ಅವರು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಜೊತೆಗೆ ಇದಕ್ಕೂ ಮುನ್ನ ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮೂರು ವರ್ಷದ ಒಂದು ಅವಧಿಗೆ, ಅದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು.
ವಿದ್ಯಾರ್ಥಿ ಹಂತದಿAದಲೇ ಪಕ್ಷದೊಂದಿಗೆ ಗುರುತಿಸಿಕೊಮಡಿದ್ದ ಇವರು ಗದಗ ತಾಲ್ಲೂಕು ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ) ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಇದ್ದರು. ಇವರ ಪಕ್ಷ ಸಂಘಟನೆಯನ್ನು ಗಮನಿಸಿರುವ ಪಕ್ಷವು, ಇವರಿಗೆ ಇದೀಗ ಮತ್ತೊಂದು ಜವಾಬ್ದಾರಿ ನೀಡಿದೆ.

ಅಭಿನಂದನೆ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ಅವರು ನೇಮಕವಾಗಿದ್ದಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ರೋಣ ವಿಧಾನಸಭಾ ಮತಕ್ಷೇತ್ರದ ಶಾಸಕರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಜಿ.ಎಸ್. ಪಾಟೀಲ, ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ. ಆರ್. ಯಾವಗಲ್ಲ, ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ, ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಬಿ.ಬಿ. ಅಸೂಟಿ, ಬಸವರಾಜ ಸುಂಕಾಪೂರ, ಪ್ರವೀಣ ಯಾವಗಲ್ಲ, ಎಂ.ಬಿ. ಕೋಳೇರಿ, ವೀರಣ್ಣ ಅಂಗಡಿ, ಶರಣಪ್ಪ ಬೆಟಗೇರಿ, ಡಿ.ಡಿ. ಮೋರನಾಳ, ಜಿ.ಆರ್. ಕೊಪ್ಪದ, ಹುಮಾಯೂನ ಮಾಗಡಿ, ಗದಗ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಸವರಾಜ ಕಡೇಮನಿ ಸೇರಿ ಪಕ್ಷದ ಹಿರಿಯ-ಕಿರಿಯ ಮುಖಂಡರು ಅಭಿನಂದಿದ್ದಾರೆ.

WhatsApp Group Join Now
Telegram Group Join Now
Share This Article