ಬಳ್ಳಾರಿ, 01.: ಹಾಸನ ಜಿಲ್ಲೆ ಸಕಲೇಶ್ವರಪುರ ಭಾಗದ ಶ್ರೀ ಕಾಲ ಭೈರವೇಶ್ವರ ದೇವಸ್ಥಾನದಲ್ಲಿ ಛಾಯಾಗ್ರಾಹಕರ ಮೇಲೆ ಹಲ್ಲೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು. ಬಳ್ಳಾರಿ ಜಿಲ್ಲಾ ಫೋಟೋ ಗ್ರಾಫರ್ ಸಂಘದ ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ ಮನವಿ ಸಲ್ಲಿಸಿದೆ.
ಪೋಟೋ ಚಿತ್ರಿಸುವ ಸಂದರ್ಭದಲ್ಲಿ ಏಕಾಏಕಿಯಾಗಿ ಅಲ್ಲಿನ ಸ್ಥಳೀಯರು ಎಂದು ಹೇಳಿಕೊಂಡು ಕೆಲವು ಕೀಡಿಗೇಡಿಗಳು ಗೂಂಡಾಗಳಂತೆ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಛಾಯಾಗ್ರಹಕರ ಮೇಲೆ ದೈಹಿಕ ಹಲ್ಲೆ ನಡೆಸಿ ಹಾಗೂ ಕ್ಯಾಮರಾಗಳನ್ನು ಸಹ ಹಾನಿ ಉಂಟು ಮಾಡಿದ್ದಾರೆ.
ಈ ಘಟನೆಯಲ್ಲಿ ನೊಂದ ನಮ್ಮ ವೃತ್ತಿಪರ ಛಾಯಾಗ್ರಾಹಕರಿಗೆ ನ್ಯಾಯ ಒದಗಿಸುವುದರ ಜೊತೆಗೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು ಹಾಗೂ ಮುಂದಿನ ದಿನದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ಸೂಕ್ತ ಕ್ರಮವಹಿಸಬೇಕೆಂದು ಒತ್ತಾಯಿಸಿದ್ದಾರೆ.


