ಶ್ರೀನಗರ: ಉಗ್ರರಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ.
ನಿಷೇಧಿತ ಜಮಾತ್-ಇ-ಇಸ್ಲಾಂ (ಜೆಇಐ)ಗೆ ಸಂಬಂಧಿಸಿದ ಸ್ಥಳಗಳನ್ನು ಗುರಿಯಾಗಿಸಿಕೊಂಡಿರುವ ಪೊಲೀಸರು, ದಾಳಿ ನಡೆಸಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಮದರಸಾಗಳು ಮತ್ತು ಮಸೀದಿಗಳಲ್ಲಿ ಗುರುವಾರ ತಪಾಸಣೆ ನಡೆಸಿದ್ದಾರೆ.
ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದಾದ್ಯಂತ ಮದರಸಾಗಳು ಮತ್ತು ಮಸೀದಿಗಳಲ್ಲಿ ಇಂದು ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರದ ಭದ್ರತೆ ಮತ್ತು ಸಮಗ್ರತೆಗೆ ಹಾನಿಕಾರಕವಾದ ಉಗ್ರಗಾಮಿ-ಸಂಬಂಧಿತ ಚಟುವಟಿಕೆಗಳಿಗೆ” ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಲು ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸೇರಿದ ಮದರಸಾಗಳು ಮತ್ತು ಮಸೀದಿಗಳಲ್ಲಿ ತಪಾಸಣೆ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


