ವಿಜಯನಗರ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಶ್ರೀಶ್ರೀಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನದ ನಿಮಿತ್ತ ಆಗಸ್ಟ್ 01 ರಂದು, ಬೆಳಿಗ್ಗೆ 11 ಗಂಟೆಗೆ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ ಹಾಗೂ ನಗರಸಭೆ ಅಧ್ಯಕ್ಷರಾದ ಎಸ್.ರೂಪೇಶ್ ಕುಮಾರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ.ಬಿ ತಿಳಿಸಿದ್ದಾರೆ.
ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ
