ಬೆಳಗಾವಿ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ನೇಸರಗಿ ಇದರ ವಿದ್ಯಾರ್ಥಿಗಳು ದಿನಾಂಕ 20.09.2025 ರಂದು ತಾಲೂಕು ಮಟ್ಟದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ಬೆಳಗಾವಿ ಜಿಲ್ಲೆಯ ನೆಹರು ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ನೇಸರಗಿ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಓಂಕಾರ್ ಬೆಳ್ಳಿಕಟ್ಟಿ ಐದು ಸಾವಿರ ಮೀಟರ್ ಓಟದಲ್ಲಿ ಮೂರನೇ ಸ್ಥಾನ ಹಾಗೂ ಸುಜಾತ ಮುದ್ದಣ್ಣವರ ಇತನು ಹಮ್ಮರ ಟ್ರೋ ಆಟ ದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕಾಲೇಜು ಸಲಹಾ ಸಮಿತಿ ಉಪಾಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಶುಭ ಕೊರಿದ್ದಾರೆ.


