ಬೆಂಗಳೂರು, ಸೆಪ್ಟೆಂಬರ್ 4: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕೇಸಲ್ಲಿ ಮುಕ್ತಿ ಸಿಕ್ಕಂತಾಗಿದೆ.