ಗ್ರಾಮೀಣ ಭಾಗದಲ್ಲಿ ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಬಿ. ವೀಣಾ ಕುಮಾರಿ

Ravi Talawar
ಗ್ರಾಮೀಣ ಭಾಗದಲ್ಲಿ ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಬಿ. ವೀಣಾ ಕುಮಾರಿ
WhatsApp Group Join Now
Telegram Group Join Now


ಬಳ್ಳಾರಿ,ಜು.15: ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ ಎಂದು ಹಿರಿಯ ರಂಗಭೂಮಿ ಕಲಾವಿದೆ ಬಿ. ವೀಣಾ ಕುಮಾರಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಸಾಗರ ಇವರ ಸಂಯುಕ್ತಾಶ್ರಯದಲ್ಲಿ ಕಂಪ್ಲಿ ತಾಲ್ಲೂಕಿನ ರಾಮಸಾಗರ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ “ಸೌರಭ ಸಾಂಸ್ಕೃತಿಕ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಮಕ್ಕಳು ತಮ್ಮಲ್ಲಿನ ಕಲಾ ಪ್ರತಿಭೆಗಳನ್ನು ಹೊರಹಾಕಬೇಕು. ಸಾಂಸ್ಕೃತಿಕವಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.
ರಾಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಮ್. ಆಶಾ ಅವರು ಮಾತನಾಡಿ, ರಾಮಸಾಗರದಲ್ಲಿ ಅನೇಕ ಜಾನಪದ ಕಲಾವಿದರು ಮತ್ತು ವಿದ್ವಾಂಸರನ್ನು ಹೊಂದಿದ್ದು, ನಾಡಿಗೆ ಅನನ್ಯ ಕೂಡುಗೆಯನ್ನು ನೀಡಿದ್ದಾರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕವು ರಂಗ ಕಲೆಯ ಶ್ರೀಮಂತ ನೆಲೆಯಾಗಿದ್ದು, ಇದಕ್ಕೆ ಪ್ರಾಚೀನ ಇತಿಹಾಸವಿದೆ. ಗ್ರಾಮೀಣ ಭಾಗದ ಎಲ್ಲಾ ಕಲಾವಿದರು ಇಂತಹ ಕಾರ್ಯಕ್ರಮಗಳ ವೇದಿಕೆಯನ್ನು ಸದುಪಯೋಗ ಪಡೆಸಿಕೊಂಡು ತಮ್ಮಲ್ಲಿರುವ ಕಲೆಯನ್ನು ಹೊರಹಾಕಬೇಕು ಎಂದು ತಿಳಿಸಿದರು.
ಬಳಿಕ ಕಾರ್ಯಕ್ರಮದಲಿ ಬಳ್ಳಾರಿಯ ಮೋಹನ್ ಕಲಬುರಗಿ ಅವರಿಂದ ವಾಯಲಿನ್ ವಾದನ, ಕೆ.ದೊಡ್ಡಬಸಪ್ಪ ಗವಾಯಿ ತಂಡದಿAದ ಸುಗಮ ಸಂಗೀತ, ವನಮಾಲ ಕುಲಕರ್ಣಿ ಸಂಗಡಿಗರಿAದ ಸಮೂಹ ನೃತ್ಯ, ಯಲ್ಲನಗೌಡ ಶಂಕರಬAಡೆ ತಂಡದಿAದ ಜಾನಪದ ಗೀತೆ, ಏಳುಬೆಂಚಿಯ ಸಿ.ಎಂ.ಕರುಣಾಮೂರ್ತಿ ಅವರಿಂದ ಕಥಾ ಕೀರ್ತನೆ, ಬಳ್ಳಾರಿಯ ವರಲಕ್ಷಿö್ಮÃ ಸಂಗಡಿಗರಿAದ ಐತಿಹಾಸಿಕ “ಹೇಮರೆಡ್ಡಿ ಮಲ್ಲಮ್ಮ” ನಾಟಕ  ಸೇರಿದಂತೆ ಇತರೆ ವೈವಿಧಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
*ಸಾಂಸ್ಕೃತಿಕ ಮೆರವಣಿಗೆ:*
ಸಾಂಸ್ಕೃತಿಕ ಸೌರಭ ಅಂಗವಾಗಿ “ಜಾನಪದ ಕಲಾ ತಂಡ”ಗಳ ಮೆರವಣಿಗೆ ನಡೆಯಿತು.    ಕಂಪ್ಲಿಯ ಶಿಕಾರಿ ರಾಮು ಮತ್ತು ಸಂಗಡಿಗರಿAದ ತಾಷರಂಡೋಲ್, ಹಳೇ ದರೋಜಿಯ ವೈ, ಮಲ್ಲಿಕಾರ್ಜುನಪ್ಪ ಮತ್ತು ಸಂಗಡಿಗರಿAದ ಹಗಲುವೇಷಗಾರಿಕೆ, ತಾರನಗರದ ಎನ್.ಎಂ. ಚಂದ್ರಯ್ಯ ಸ್ವಾಮಿ ಮತ್ತು ಸಂಗಡಿಗರಿAದ ವೀರಗಾಸೆ ಸೇರಿದಂತೆ ಇನ್ನಿಯರೆ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದವು.
ಈ ಸಂದರ್ಭದಲ್ಲಿ ರಾಮಸಾಗರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಆರ್.ಎಂ ರಾಮಯ್ಯ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಎಂ. ಪ್ರಶಾಂತ್, ರಂಗಭೂಮಿ ಕಲಾವಿದೆ ಎ.ವರಲಕ್ಷ್ಮೀ, ಹಿರಿಯ ನೃತ್ಯ ಕಲಾವಿದರಾದ ವನಮಾಲ ಕುಲಕರ್ಣಿ, ಸೀತಾ ಚಪ್ಪರ್ ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article