ಬೆಳಗಾವಿ. 06.ಕಾರ್ಯಕರ್ತರ ಸಂಕಲ್ಪ ಪೂರಿತ ಬದ್ಧತೆ ಭಾರತೀಯ ಜನತಾ ಪಾರ್ಟಿಯ ಸಂಘಟನಾ ಶಕ್ತಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಳಗಾವಿ ಗ್ರಾಮಾಂತರ ಜಿಲ್ಲೆಯು ಸಂಘಟನಾ ಪರ್ವದಲ್ಲಿ ಬೂತ್ ಕಮಿಟಿ ರಚನೆಯಲ್ಲಿ ರಾಜ್ಯದಲ್ಲಿ ಶೇ 100% ಗುರಿ ತಲುಪುವ ಮೂಲಕ ಸಂಘಟನಾ ಪರ್ವ ಅಭಿಯಾನದ ಅತ್ಯುನ್ನತ ಗುರಿ ಸಾಧಿಸಿದ್ದಾರೆ, ಇದಕ್ಕಾಗಿ ರಾಜ್ಯ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲಿಕ್ಕೆ ಶಕ್ತಿಯನ್ನು ತುಂಬಿದ್ದಾರೆ ಎಂದು ಪ್ರೇರಣಾದಾಯಕ ಮಾತುಗಳನ್ನು ಆಡಿದ್ದಾರೆ, ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆಯ ಕ್ರಿಯಾಶೀಲ ಅಧ್ಯಕ್ಷರಾದ ಸುಭಾಷ ಪಾಟೀಲ ಅವರನ್ನು ಹಾಗೂ ಸಂಸದರು ,ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು ಮುಖಂಡರು ಮಂಡಲದ ಅಧ್ಯಕ್ಷರು ರಾಜ್ಯ ಪದಾಧಿಕಾರಿಗಳು, ಜಿಲ್ಲೆಯ ಪದಾಧಿಕಾರಿಗಳು ಮಂಡಲದ ಪದಾಧಿಕಾರಿಗಳು ಬೂತ್ ಮಟ್ಟದ ಕಾರ್ಯಕರ್ತರಿಗೆ ಕೂಡ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.