ಬಾಗಲಕೋಟೆ, ಫೆಬ್ರವರಿ 09: ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸತೀಶ್ ಜೋಶಿ (44) ಮೃತ ವ್ಯಕ್ತಿ. ಒಂದು ವಾರದ ಹಿಂದೆ ಕುಂಭಮೇಳದಲ್ಲಿ ಭಾಗಿಯಾಗಿದ್ದ ಸತೀಶ್, ಬಳಿಕ ಕಾಶಿಗೆ ತೆರಳಿದ್ದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಮೃತ ಸತೀಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ವ್ಯಕ್ತಿ ಸಾವು
![ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ವ್ಯಕ್ತಿ ಸಾವು ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ವ್ಯಕ್ತಿ ಸಾವು](https://hasirukranti.in/wp-content/uploads/2025/02/05-7-860x552.jpg)
ಪ್ರಯಾಗರಾಜ್ಗೆ ಹೋಗಿದ್ದ ಕೋಲಾರ ಯುವಕ ಸಾವು: ಕುಂಭಮೇಳದಲ್ಲಿ ಭಾಗಿಯಾಗಲು ಪ್ರಯಾಗರಾಜ್ಗೆ ಹೋಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಯಾಗರಾಜ್ನಿಂದ ಅಯೋಧ್ಯೆಗೆ ಹೋಗುವಾಗ ಗೋರಖಪುರ ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಪ್ರವೀಣ್ ಹೊಸಮನಿ ಮೃತಪಟ್ಟಿದ್ದರು.