ಬಳ್ಳಾರಿ ಜಿಲ್ಲಾ ಕೌಲ್ ಬಜಾರ್ ಮಂಡಲದ ಪದಾಧಿಕಾರಿಗಳು ಮತ್ತು 7 ಮೋರ್ಚಾ ಪದಾಧಿಕಾರಿಗಳು ಪಕ್ಷ ಸಂಘಟನೆಗೆ  ವಿವಿಧ ಹುದ್ದೆಗಳಿಗೆ ಕಾರ್ಯಕರ್ತರ ನೇಮಕ

MK HasiruKranti
ಬಳ್ಳಾರಿ ಜಿಲ್ಲಾ ಕೌಲ್ ಬಜಾರ್ ಮಂಡಲದ ಪದಾಧಿಕಾರಿಗಳು ಮತ್ತು 7 ಮೋರ್ಚಾ ಪದಾಧಿಕಾರಿಗಳು ಪಕ್ಷ ಸಂಘಟನೆಗೆ  ವಿವಿಧ ಹುದ್ದೆಗಳಿಗೆ ಕಾರ್ಯಕರ್ತರ ನೇಮಕ
WhatsApp Group Join Now
Telegram Group Join Now
ಬಳ್ಳಾರಿ: 16.ಭಾರತೀಯ ಜನತಾ ಪಾರ್ಟಿಯ ಬಳ್ಳಾರಿ ಕೌಲ್ ಬಜಾರ್ ಮಂಡಲದಲ್ಲಿ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಮಂಡಲ ಮತ್ತು 7 ಮೋರ್ಚಾ ಹಾಗೂ ವಿವಿಧ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಂಡಲ ಅಧ್ಯಕ್ಷ ಎ. ನಾಗರಾಜ ರೆಡ್ಡಿ ಅವರ ಸಹಿಯೊಂದಿಗೆ ದಿನಾಂಕ 16-03-2026 ರಂದು ನೇಮಕಾತಿ ಆದೇಶ ಹೊರಡಿಸಲಾಗಿದ್ದು, ಪಕ್ಷದ ವಿವಿಧ ಘಟಕಗಳಿಗೆ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ.
ಪಕ್ಷದ ಸಂಘಟನಾ ಚಟುವಟಿಕೆಗಳನ್ನು ವಿಸ್ತರಿಸುವ ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ನೇಮಕಗೊಂಡ ಪದಾಧಿಕಾರಿಗಳು ಪಕ್ಷದ ತತ್ವಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕೆಂದು ಸೂಚಿಸಲಾಗಿದೆ.
ಆದೇಶದ ಪ್ರಕಾರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಲತಾ, ಎಸ್‌.ಸಿ ಮೋರ್ಚಾ ಅಧ್ಯಕ್ಷರಾಗಿ ಸುಂಕಣ್ಣ.ಎಸ್‌.ಟಿ ಮೋರ್ಚಾ ಅಧ್ಯಕ್ಷರಾಗಿ ರಾಜಶೇಖರ್, ಒಬಿಸಿ ಮೋರ್ಚಾ ಅಧ್ಯಕ್ಷರಾಗಿ ಆರ್. ಶೇಖಣ್ಣ, ರೈತ ಮೋರ್ಚಾ ಅಧ್ಯಕ್ಷರಾಗಿ ವೆಂಕಟೇಶ್, ಯುವ ಮೋರ್ಚಾ ಅಧ್ಯಕ್ಷರಾಗಿ ಬಟ್ಟಿ ಗಾದಿಲಿಂಗ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮೊಹಮ್ಮದ್ ಗೌಸ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ ಮತ್ತೊಂದು ಆದೇಶದ ಮೂಲಕ ಮಂಡಲ ಪದಾಧಿಕಾರಿಗಳ  ಆಯ್ಕೆ  ಸಂಘಟನೆಯಲ್ಲಿ ವಿವಿಧ ಹುದ್ದೆಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಅದರಂತೆ ಎ. ನಾಗರಾಜ ರೆಡ್ಡಿ ಅಧ್ಯಕ್ಷರಾಗಿ, ಕೊಂಡಿ ಮಲ್ಲಿಕಾರ್ಜುನ,ವೆಂಕಟೇಶ್ ಗುರುರಾಜ್, ರಾಮಚಂದ್ರ, ಹನುಮಂತ ರಾವ್ ಮತ್ತು ಮೊಹಮ್ಮದ್ ಖದಿರ್ ಅವರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಜೊತೆಗೆ ಎಂ.ಪಿ.ರಾಜೇಶ್ ಮತ್ತು ಜಿ.ಅವಿನಾಶ್ ನಾಯ್ಡು ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ, ಈ ಮೂರ್ತಿ. ವಿ.ಶ್ರೀಧರ್,ಯೇಸು, ನೀಲಕಂಠ ಆಚಾರ್ಯ, ಮಲೇಶ್ ಮತ್ತು ಅನ್ನಕ್ಲರ ಅವರನ್ನು ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಹಾಗೆಯೇ  ಜಿ. ಅಭಿಲಾಶ್ ನಾಯ್ಡು ಅವರನ್ನು ಖಜಾಂಚಿಯಾಗಿ ಹಾಗೂ ವಿ. ಜೆ . ಜೋಸೆಫ್ ಅವರನ್ನು ಕಾರ್ಯಾಲಯ ಕಾರ್ಯದರ್ಶಿಯಾಗಿ ಜವಾಬ್ದಾರಿ ನೀಡಲಾಗಿದೆ.
ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ನೇಮಕಗೊಂಡ ಎಲ್ಲ ಪದಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಜನಸಂಪರ್ಕ ಚಟುವಟಿಕೆಗಳನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಮಂಡಲ ಅಧ್ಯಕ್ಷರು ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಬಿಜೆಪಿ ವಿವಿಧ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಪ್ರಯತ್ನ ನಡೆಸುತ್ತಿದೆ. ಅದೇ ಭಾಗವಾಗಿ ಈ ನೇಮಕಾತಿ ಮಾಡಲಾಗಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ಸಿಗಲಿದೆ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
WhatsApp Group Join Now
Telegram Group Join Now
Share This Article