ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025: ಶರಣ ಪ್ರಕಾಶ್ ಪಾಟೀಲ್

Ravi Talawar
ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025: ಶರಣ ಪ್ರಕಾಶ್ ಪಾಟೀಲ್
WhatsApp Group Join Now
Telegram Group Join Now

ಬೆಂಗಳೂರು: ಕೌಶಲ್ಯಾಭಿವೃದ್ದಿಗೆ ಒತ್ತು ನೀಡುವ ನಿಟ್ಟಿನಲ್ಲಿ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ. ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article