ಬಿಜೆಪಿ ರೈತ ಮೋರ್ಚಾ ವತಿಯಿಂದ ಬಾರುಕೋಲ ಪ್ರತಿಭಟನೆ.

Pratibha Boi
ಬಿಜೆಪಿ ರೈತ ಮೋರ್ಚಾ ವತಿಯಿಂದ ಬಾರುಕೋಲ ಪ್ರತಿಭಟನೆ.
WhatsApp Group Join Now
Telegram Group Join Now

ಬೆಳಗಾವಿ.ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಚಕ್ಕಡಿ ಹಾಗೂ ಟ್ರ್ಯಾಕ್ಟರ್ ರ್ಯಾಲಿ ಮೂಲಕ ತೆರಳಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು (ಬಾರುಕೋಲು ಹೆಗಲಿಗೆ ಹಾಕಿಕೊಂಡು) ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ),
ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡರ,ಡಾ||ವಿಶ್ವನಾಥ್ ಪಾಟೀಲ, ಮುಖಂಡರಾದ ಎಂ.ಬಿ.ಜಿರಲಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಜಗದೀಶ್ ಬೂದಿಹಾಳ, ಕಲ್ಲಪ್ಪ ಶಹಾಪೂರಕರ, ರಾಜಕುಮಾರ ಹರಗಾಪೂರ ಹಾಗೂ ಮುಖಂಡರು, ರೈತರು, ಪ್ರಮುಖ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

WhatsApp Group Join Now
Telegram Group Join Now
Share This Article