ಬೆಳಗಾವಿ,ಏಪ್ರಿಲ್ 15:. ಜಿದ್ದಾಜಿದ್ದಿನ ಕಣವಾಗಿರುವ ಬೆಳಗಾವಿ ಲೋಕಸಭಾ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಜಗಧೀಶ ಶೆಟ್ಟರ ಅವರು ಸೋಮವಾರದಂದು ಜಿಲ್ಲಾಧಿಕಾರಿಗಳಾದ ನಿತೀಶ ಪಾಟೀಲ ಅವರು ಮುಖಾಂತರ ಸಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ರಮೇಶ ಜಾರಕಿಹೊಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ವಿ ಪ ಸದಸ್ಯ ಹಣಮಂತ ನಿರಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.