ಕುಡಿದು ವಾಹನ ಚಲಾವಣೆ ಅಪಘಾತದಲ್ಲಿ ಸಾವುಗಳಾದರೆ ಕೊಲೆ ಪ್ರಕರಣ ದಾಖಲು ಮಾಡಲಾಗುವದು: ಬೆಳಗಾವಿ ಎಸ್.ಪಿ ಕೆ. ರಾಮರಾಜನ್

Hasiru Kranti
ಕುಡಿದು ವಾಹನ ಚಲಾವಣೆ ಅಪಘಾತದಲ್ಲಿ ಸಾವುಗಳಾದರೆ ಕೊಲೆ ಪ್ರಕರಣ ದಾಖಲು ಮಾಡಲಾಗುವದು: ಬೆಳಗಾವಿ ಎಸ್.ಪಿ ಕೆ. ರಾಮರಾಜನ್
WhatsApp Group Join Now
Telegram Group Join Now
ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು.
ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಿ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು


ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು

– ಕೆ ರಾಮರಾಜನ್, ಪೊಲೀಸ್ ವರಿಷ್ಠಾಧಿಕಾರಿ, ಬೆಳಗಾವಿ

ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಹಾಗೂ ಕರವೇ ಅಧ್ಯಕ್ಷ ಶಬ್ಬೀರ್ ಸಾತಬಚ್ಚೆ, ಉಪಾಧ್ಯಕ್ಷ ಮಂಜು ಹೋಳಿಕಟ್ಟಿ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು
ಫೋಟೋ ಶೀರ್ಷಿಕೆ: ಬೆಳಗಾವಿ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಪೊಲೀಸ್ ಸಿಬ್ಬಂದಿಗಳಿಂದ ಗೌರವವನ್ನು ಸ್ವೀಕರಿಸಿದರು.

WhatsApp Group Join Now
Telegram Group Join Now
Share This Article