ಬೆಳಗಾವಿ: 2025-26ನೇ ಸಾಲಿನ ಬೆಳಗಾವಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಬೆಳಗಾವಿ ಜಿಲ್ಲಾಕ್ರೀಡಾಂಗಣದ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.
ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ. 02 ರಂದು ಬೆಳಿಗ್ಗೆ 9.00 ಗಂಟೆಗೆ ಆಗಮಿಸಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.ಅಥ್ಲೆಟಿಕ್ಸ್ ಕ್ರೀಡೆಗಳಾದ (ಮಹಿಳೆಯರಿಗೆ ಮತ್ತು ಪುರುಷರಿಗೆ) ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಹರ್ಡಲ್ಸ್ ಹಾಗೂ ಗುಂಪು ಆಟಗಳಾದ ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಾಸನ, ಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ.
ನಿಯಮಗಳು: ದಸರಾ ಭಾಗವಹಿಸುವ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಬೆಳಗಾವಿ ತಾಲೂಕಿನ ರಹವಾಸಿಯಾಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗ ವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿದಲ್ಲಿ ಅಂತವರ ಆಯ್ಕೆಯನ್ನು ರದ್ದು ಗೊಳಿಸಲಾಗುವುದು. ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು.
ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು https://dasaracmcup-2025.etrpindia.com/KA-sports (ಆನ್‍ಲೈನ್ ಲಿಂಕ್) ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 9632487391, 7411144485 ಗಳಿಗೆ ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.